Tuesday, June 15, 2021
Homeಸುದ್ದಿ ಜಾಲಖಾಸಗಿ ಆಸ್ಪತ್ರೆಗಳಲ್ಲಿ ನಿಗದಿಗಿಂತ ಹೆಚ್ಚು ಶುಲ್ಕ ಪಡೆದರೆ ಲೈಸೆನ್ಸ್ ರದ್ದು : ಸಚಿವ ಸುಧಾಕರ್...

ಇದೀಗ ಬಂದ ಸುದ್ದಿ

ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿಗಿಂತ ಹೆಚ್ಚು ಶುಲ್ಕ ಪಡೆದರೆ ಲೈಸೆನ್ಸ್ ರದ್ದು : ಸಚಿವ ಸುಧಾಕರ್ ಎಚ್ಚರಿಕೆ

ಬೆಂಗಳೂರು : ನಿಗದಿಗಿಂತ ಹೆಚ್ಚು ಶುಲ್ಕ ಪಡೆದರೆ ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಯಡಿ ಅಡಿ ಆಸ್ಪತ್ರೆ ಪರವಾನಗಿ ರದ್ದುಗೊಳಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ರೋಗಿಗಳಿಗೆ ನೀಡುವ ರೆಮ್‌ಡಿಸಿವಿರ್ ಚುಚ್ಚುಮದ್ದು ಸಹ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಬಂದಿದೆ. ಸಹಾಯಕ ಔಷಧ ನಿಯಂತ್ರಣಾಧಿಕಾರಿ ಸಹ ಮೆಡಿಕಲ್ ಸ್ಟೋರ್‌ ಗಳ ಮೇಲೆ ದಾಳಿ ನಡೆಸಿ, ಮಾರಾಟ ಮಾಡುವವರ ಬಗ್ಗೆ ಪೊಲೀಸ್‌ ವರಿಷ್ಠಾಧಿಕಾರಿಗೆ ಮಾಹಿತಿ ನೀಡಬೇಕು ಎಂದು ಸೋಮವಾರ ತಿಳಿಸಿದರು.

ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಕೋವಿಡ್‌ ರೋಗಿಗಳಿಂದ ಹೆಚ್ಚು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಹೆಚ್ಚು ಹಣ ತೆಗೆದುಕೊಳ್ಳುತ್ತಿರುವ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ.. 750 ತಜ್ಞ ವೈದ್ಯರು ಸೇರಿದಂತೆ 2,500 ವೈದ್ಯರನ್ನು ನೇರ ನೇಮಕ ಮಾಡಿಕೊಂಡಿದ್ದು, ಎರಡು ದಿನದಲ್ಲಿ ನೇಮಕಾತಿ ಪತ್ರ ನೀಡಲಾಗುವುದು. ವಾರದಲ್ಲಿ ಕೆಲಸಕ್ಕೆ ಅವರನ್ನು ನಿಯೋಜಿಸಲಾಗುವುದು..ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸಕ್ರಿಯವಾಗಿ ಕೆಲಸ ಮಾಡುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img