Sunday, June 13, 2021
Homeಸುದ್ದಿ ಜಾಲರಾಜ್ಯದಲ್ಲಿಂದು 517 ಮಂದಿ ಕೊರೋನಾಗೆ ಬಲಿ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿಂದು 517 ಮಂದಿ ಕೊರೋನಾಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 517 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು ಹೊಸದಾಗಿ 39.998 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 20,15,191 ಕ್ಕೆ ಏರಿಕೆಯಾಗಿದೆ.

ಇದುವರೆಗೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 20,368 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 34,752 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 14,40,621 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 5,92,182 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 275 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಹೊಸದಾಗಿ 16,286 ಜನರಿಗೆ ಸೋಂಕು ತಗುಲಿದೆ. 3,60,619 ಸಕ್ರಿಯ ಪ್ರಕರಣಗಳು ಇವೆ. ಶಿವಮೊಗ್ಗದಲ್ಲಿ 26, ಕಲಬುರಗಿ 23, ಹಾಸನ 19, ಬಳ್ಳಾರಿ 17 ಮಂದಿ ಸೇರಿ ರಾಜ್ಯದಲ್ಲಿ 517 ಸೋಂಕಿತರು ಮೃತಪಟ್ಟಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img