Monday, June 14, 2021
Homeಸುದ್ದಿ ಜಾಲಕೋವಿಡ್ ಸೋಂಕಿತರ ಚಿಕಿತ್ಸೆಗೆ ಹಜ್ ಭವನದಲ್ಲಿ ಅಂತಿಮ ಸಿದ್ಧತೆ

ಇದೀಗ ಬಂದ ಸುದ್ದಿ

ಕೋವಿಡ್ ಸೋಂಕಿತರ ಚಿಕಿತ್ಸೆಗೆ ಹಜ್ ಭವನದಲ್ಲಿ ಅಂತಿಮ ಸಿದ್ಧತೆ

ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಹಜ್ ಭವನದಲ್ಲಿ ಸಿದ್ಧಗೊಳ್ಳುತ್ತಿರುವ ಕೋವಿಡ್ ಕೇರ್ ಸೆಂಟರ್ ನ ಅಂತಿಮ ಸಿದ್ಧತೆಯನ್ನು ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಬುಧವಾರ ಪರಿಶಿಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು ಈಗಾಗಲೇ ಯಲಹಂಕ ವಲಯದ ಜಿಕೆವಿಕೆಯಲ್ಲಿ ಸುಸಜ್ಜಿತ ಕೋವಿಡ್ ಕೇರ್ ಸೆಂಟರ್ ಆರಂಭವಾಗಿದೆ. ಹಜ್ ಭವನದಲ್ಲಿ ಸದ್ಯದಲ್ಲಿಯೇ ಚಿಕಿತ್ಸೆ ಮತ್ತು ಹಾರೈಕೆ ಆರಂಭಿಸಲಾಗುವುದು ಎಂದು ತಿಳಿಸಿದರು.

ಹಜ್ ಭವನದಲ್ಲಿ ಕೋವಿಡ್-19 ರ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ 50 ಹಾಸಿಗೆಗಳ ಐಸಿಯು ಘಟಕ ಮತ್ತು 150 ಹಾಸಿಗೆಗಳ ಹೈಫ್ಲೋ ಆಕ್ಸಿಜನ್ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ಹಜ್ ಭವನದಲ್ಲಿ ಈ ಸೌಲಭ್ಯಗಳನ್ನು ಕಲ್ಪಿಸುವ ಕಾಮಗಾರಿ ಭರದಿಂದ ಸಾಗಿದ್ದು, ಅಂತಿಮ ಹಂತದಲ್ಲಿದೆ ಎಂದರು.
ಇಲ್ಲಿ ಸೋಂಕಿತರ ಚಿಕಿತ್ಸೆಗೆ ಸಾಕಷ್ಟು ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಇದನ್ನು ತಡೆಯಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ತುರ್ತಾಗಿ ಆರೋಗ್ಯ ಸೇವೆ ಎಲ್ಲರಿಗೂ ಲಭ್ಯವಾಗುವಂತೆ ಮಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಯಲಹಂಕ ವಲಯದಲ್ಲಿ ಸೋಂಕಿತರಿಗೆ ತಡ ಮಾಡದೇ ಸಕಾಲದಲ್ಲಿ ಚಿಕಿತ್ಸಾ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ವಲಯದಲ್ಲಿ ಸೋಂಕಿತರ ಆರೋಗ್ಯ ರಕ್ಷಣೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಅಗತ್ಯ ಬಿದ್ದರೆ ಮತ್ತಷ್ಟು ಕೋವಿಡ್ ಕೇರ್ ಸೆಂಟರ್ ಗಳನ್ನು ಆರಂಭಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಕೃಷ್ಣ ಬೈರೇಗೌಡ ಸೇರಿದಂತೆ ಬಿಬಿಎಂಪಿಯ ಅಧಿಕಾರಿಗಳು ಇದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img