Monday, June 14, 2021
Homeರಾಜ್ಯರಾಜ್ಯದಲ್ಲಿ 24 ಗಂಟೆಯಲ್ಲಿ 35,297 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ 24 ಗಂಟೆಯಲ್ಲಿ 35,297 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಬೆಂಗಳೂರು : .ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 35297 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 593078 ಕ್ಕೆ ಏರಿಕೆಯಾಗಿದೆ. ಅಲ್ಲದೇ ಸೋಂಕಿತರಾದಂತ 344 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 15191 ಜನರು ಸೇರಿದಂತೆ ರಾಜ್ಯಾಧ್ಯಂತ 35297 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಇನ್ನೂ, ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 344 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 20712 ಕ್ಕೆ ಏರಿಕೆಯಾಗಿದೆ.

ಇವರಲ್ಲಿ ಇಂದು 34057 ಸೋಂಕಿತರು ಸೇರಿದಂತೆ ಇದುವರೆಗೆ 1474678 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ಬೆಂಗಳೂರು ನಗರದಲ್ಲಿ 359565 ಸಕ್ರೀಯ ಸೋಂಕಿತರು ಸೇರಿದಂತೆ ರಾಜ್ಯಾಧ್ಯಂತ 593078 ಸಕ್ರೀಯ ಸೋಂಕಿತರು ಇರುವುದಾಗಿ ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇನ್ನೂ ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 161 ಜನರು ಸೇರಿದಂತೆ ರಾಜ್ಯಾಧ್ಯಂತ 344 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 20712ಬ ಕ್ಕೆ ಏರಿಕೆಯಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img