Monday, June 14, 2021
Homeಕೋವಿಡ್-19ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 13,402 ಕೊರೊನಾ ಪಾಸಿಟಿವ್ ಕೇಸ್ ಪತ್ತೆ

ಇದೀಗ ಬಂದ ಸುದ್ದಿ

ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 13,402 ಕೊರೊನಾ ಪಾಸಿಟಿವ್ ಕೇಸ್ ಪತ್ತೆ

ಬೆಂಗಳೂರು : ಬೆಂಗಳೂರಿನಲ್ಲಿ ಇಂದು 13,402 ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 10242714 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಮುಖವಾಗಿದ್ದು, ಇಂದು 13402 ಮಂದಿಗೆ ಸೋಂಕು ಧೃಡವಾಗಿದೆ. ಕಿಲ್ಲರ್ ಕೊರೊನಾ ಸೋಂಕಿಗೆ ಬೆಂಗಳೂರಿನಲ್ಲಿ ಇಂದು 94 ಮಂದಿ ಬಲಿಯಾಗಿದ್ದಾರೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 13,402 ಜನರು, ಹಾಸನ ಜಿಲ್ಲೆಯಲ್ಲಿ 2,443, ತುಮಕೂರಿನಲ್ಲಿ 2,302 ಸೇರಿದಂತೆ ರಾಜ್ಯಾಧ್ಯಂತ 41,664 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 21,71,931ಕ್ಕೆ ಏರಿಕೆಯಾಗಿದೆ.

ಇಂದು ಸೋಂಕಿತರಾದಂತ 34,425 ಜನರು ಸೇರಿದಂತೆ ಇದುವರೆಗೆ 15,44,982 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ 3,66,791 ಸೇರಿದಂತೆ ರಾಜ್ಯಾಧ್ಯಂತ 6,05,494 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img