Monday, June 14, 2021
Homeಸುದ್ದಿ ಜಾಲತೌಕ್ತೆ ಚಂಡಮಾರುತ: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆ, ರೆಡ್ ಅಲರ್ಟ್...

ಇದೀಗ ಬಂದ ಸುದ್ದಿ

ತೌಕ್ತೆ ಚಂಡಮಾರುತ: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆ, ರೆಡ್ ಅಲರ್ಟ್ ಘೋಷಣೆ,

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ತೌಕ್ತೆ ಚಂಡಮಾರುತ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೂ ಅಪ್ಪಳಿಸಿದ್ದು ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಮಲೆನಾಡು ಭಾಗಗಳಲ್ಲಿ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕೆಲವು ಕಡೆಗಳಲ್ಲಿ 20 ಸೆಂಟಿ ಮೀಟರ್ ಗಳಿಗೂ ಅಧಿಕ ಮಳೆಯಾಗುತ್ತಿದೆ .ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ನಾಡಿದ್ದು 18ರಂದು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಲಿದೆ.  ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ತೌಕ್ತೆ ಚಂಡಮಾರುತ ಈ ವರ್ಷದ ಮೊದಲ ಚಂಡಮಾರುತವಾಗಿದ್ದು ಗಂಟೆಗೆ 150ರಿಂದ 160 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಿ ಅದು 175 ಕಿಲೋ ಮೀಟರ್ ವೇಗವನ್ನು ಕೂಡ ಪಡೆಯುವ ಸಾಧ್ಯತೆಯಿದೆ. ನಿನ್ನೆ ಕೇರಳದ ಹಲವು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿರುವುದಲ್ಲದೆ ಅಪಾರ ಪ್ರಮಾಣದಲ್ಲಿ ನಷ್ಟವುಂಟಾಗಿದೆ.

ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆ ಉಡುಪಿ ಮಂಗಳೂರಿನಾದ್ಯಂತ ಸುರಿಯುತ್ತಿದೆ.  ರಕ್ಷಣೆಗೆ ಜಿಲ್ಲೆಗೆ ಎನ್ ಡಿಆರ್ ಎಫ್ ತಂಡ ಧಾವಿಸಿದೆ.

ವಾಯುಭಾರ ಕುಸಿತ ತೀವ್ರಗೊಂಡ ಚಂಡಮಾರುತ ಅಬ್ಬರ ಮುಂದಿನ 12 ಗಂಟೆಗಳಲ್ಲಿ ಹೆಚ್ಚಲಿದ್ದು, ಉತ್ತರ-ವಾಯುವ್ಯ ಮತ್ತು ಮಂಗಳವಾರ ಬೆಳಿಗ್ಗೆ ಗುಜರಾತ್ ಕರಾವಳಿಗೆ ತಲುಪುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಕೂಡ ಕೇರಳದಲ್ಲಿ ತೀವ್ರ ಮಳೆಯಾಗಲಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img