Tuesday, June 15, 2021
Homeಕೋವಿಡ್-19ಚಿಕ್ಕಮಗಳೂರು ಜಿಲ್ಲೆಯ ಈ ಗ್ರಾಮದಲ್ಲಿ 75 ಜನರಿಗೆ ಕೊರೊನಾ

ಇದೀಗ ಬಂದ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ಈ ಗ್ರಾಮದಲ್ಲಿ 75 ಜನರಿಗೆ ಕೊರೊನಾ

ಚಿಕ್ಕಮಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಸಮೀಪದ ಕೊಳ್ಳಿಕೊಪ್ಪ ಗ್ರಾಮದ 75 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಕೊಳ್ಳಿಕೊಪ್ಪಿ ಗ್ರಾಮದ 75 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಡೀ ಹಳ್ಳಿಯನ್ನೇ ಸೀಲ್ ಡೌನ್ ಮಾಡಲಾಗಿದೆ. ಗ್ರಾಮದಲ್ಲಿ 75 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಗ್ರಾಮಕ್ಕೆ ತಹಶೀಲ್ದಾರ್ ಕಾಂತರಾಜು, ಎಸಿ ನಾಗರಾಜು, ಪಿಡಿಓ ಭೇಟಿ ನೀಡಿ ಸೋಂಕಿನ ಬಗ್ಗೆ ಮಾಹಿತಿ ನೀಡಿದ್ದಾರೆ.

ಸೋಂಕಿತರು ಮನೆಯಿಂದ ಆಚೆ ಬರದಂತೆ ಸೂಚನೆ ನೀಡಲಾಗಿದ್ದು, ನಿಮಗೆ 15 ದಿನಕ್ಕೆ ಆಗುವಷ್ಟು ರೇಷನ್ ವ್ಯವಸ್ಥೆಯನ್ನು ತಾಲೂಕಿನ ಆಡಳಿತವೇ ಮಾಡಲಿದೆ. ಯಾರೂ ಮನೆಯಿಂದ ಹೊರಬಾರದಂತೆ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img