Sunday, June 13, 2021
Homeಸುದ್ದಿ ಜಾಲದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,11,170 ಜನರಿಗೆ ಕೊರೊನಾ; 4,077 ಮಂದಿ ಸಾವು

ಇದೀಗ ಬಂದ ಸುದ್ದಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,11,170 ಜನರಿಗೆ ಕೊರೊನಾ; 4,077 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 3,11,170 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,46,84,077ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 4,077 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,70,284ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 36,18,458 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,07,95,335 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,62,437 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 18,32,950 ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 31,48,50,143 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 18,22,20,164 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img