Sunday, June 13, 2021
Homeಸುದ್ದಿ ಜಾಲಕಾಂಗ್ರೆಸ್ ಸಂಸದ ರಾಜೀವ್ ಸತಾವ್ ಕೊರೊನಾಗೆ ಬಲಿ

ಇದೀಗ ಬಂದ ಸುದ್ದಿ

ಕಾಂಗ್ರೆಸ್ ಸಂಸದ ರಾಜೀವ್ ಸತಾವ್ ಕೊರೊನಾಗೆ ಬಲಿ

ನವದೆಹಲಿ: ಕರೊನಾ ವೈರಸ್​ ಸೋಂಕಿನಿಂದ ಬಳಲುತ್ತಿದ್ದ ಕಾಂಗ್ರೆಸ್​ ರಾಜ್ಯಸಭಾ ಸದಸ್ಯ ರಾಜೀವ್ ಸತಾವ್ ಅವರು ಭಾನುವಾರ ಕೊನೆಯುಸಿರೆಳೆದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರಿಗೆ ರಾಜೀವ್​ ಅವರು ತುಂಬಾ ಆಪ್ತರಾಗಿದ್ದರು. ಏಪ್ರಿಲ್ 22ರಂದು ಅವರಿಗೆ ಕರೊನಾ ಸೋಂಕು ತಗುಲಿತ್ತು. ಪುಣೆಯ ಜೆಹಾಂಗೀರ್​ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ವೆಂಟಿಲೇಟರ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.

ಪ್ರಸ್ತುತ ರಾಜ್ಯಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದರು. ಈ ಹಿಂದೆ ಮಹಾರಾಷ್ಟ್ರದ ಹಿಂಗೋಲಿಯಿಂದ 16ನೇ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದರು. ಈ ಸಂದರ್ಭದಲ್ಲಿ ಶಿವಸೇನೆ ಸಂಸದ ಸುಭಾಷ್ ವಾಂಖೆಡೆ ಸೋಲಿಸಿದ್ದರು.

ರಾಜೀವ್​ ಅವರು ಗುಜರಾತ್ ರಾಜ್ಯದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಉಸ್ತುವಾರಿ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಶಾಶ್ವತವಾಗಿ ಆಯ್ಕೆಯಾಗಿದ್ದರು. ಗುಜರಾತ್‌ನ ಉಸ್ತುವಾರಿ ಆಗಿ ನೇಮಕಗೊಳ್ಳುವ ಮೊದಲು ಅವರು ಗುಜರಾತ್ ವಿಧಾನಸಭಾ ಚುನಾವಣೆ (2017) ಸಮಯದಲ್ಲಿ ಸೌರಾಷ್ಟ್ರ ಪ್ರದೇಶದ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿಯಾಗಿದ್ದರು, ಅಲ್ಲಿ ಕಾಂಗ್ರೆಸ್ ಗರಿಷ್ಠ ಸ್ಥಾನಗಳನ್ನು ಗೆದ್ದುಕೊಂಡಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img