Sunday, June 13, 2021
Homeದೆಹಲಿದೆಹಲಿಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ : ಸಿಎಂ ಕೇಜ್ರಿವಾಲ್

ಇದೀಗ ಬಂದ ಸುದ್ದಿ

ದೆಹಲಿಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ : ಸಿಎಂ ಕೇಜ್ರಿವಾಲ್

ನವದೆಹಲಿ : ಕೋವಿಡ್-19 ಪ್ರಕರಣಗಳಲ್ಲಿ ನಿರಂತರ ಕುಸಿತದ ಹೊರತಾಗಿಯೂ ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ಬೆಳಿಗ್ಗೆ 5 ಗಂಟೆಗೆ ಕೊನೆಗೊಳ್ಳಬೇಕಾಗಿದ್ದ ಕೊರೊನಾ ಲಾಕ್ ಡೌನ್ ಅನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ.

ನಾವು ಲಾಕ್ ಡೌನ್ ಅನ್ನು ಇನ್ನೂ ಒಂದು ವಾರ ವಿಸ್ತರಿಸುತ್ತಿದ್ದೇವೆ. ನಾಳೆಯ ಬದಲು, ಮುಂದಿನ ಸೋಮವಾರ, ದೆಹಲಿಯಲ್ಲಿ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್ ಡೌನ್ ಅನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಕೇಜ್ರಿವಾಲ್ ಸರ್ಕಾರ ಲಾಕ್ ಡೌನ್ ಹೇರಿತ್ತು. ಇದೀಗ ಲಾಕ್ ಡೌನ್ ಅನ್ನು ಮತ್ತೆ ಒಂದು ವಾರಗಳ ವಿಸ್ತರಣೆ ಮಾಡಲಾಗಿದೆ.

ಇನ್ನು ದೆಹಲಿಯಲ್ಲಿ ಶನಿವಾರ ಕೇವಲ 6,430 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ ಮತ್ತು 337 ಸಾವುನೋವುಗಳು ವರದಿಯಾಗಿವೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img