Tuesday, June 15, 2021
Homeಸುದ್ದಿ ಜಾಲಹೃದ್ರೋಗ ತಜ್ಞ ಡಾ. ಕೆ. ಕೆ. ಅಗರ್ವಾಲ್ ಕೊರೊನಾಗೆ ಬಲಿ

ಇದೀಗ ಬಂದ ಸುದ್ದಿ

ಹೃದ್ರೋಗ ತಜ್ಞ ಡಾ. ಕೆ. ಕೆ. ಅಗರ್ವಾಲ್ ಕೊರೊನಾಗೆ ಬಲಿ

ನವದೆಹಲಿ, ಮೇ 18; ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಐಎಂಎಯ ಮಾಜಿ ಅಧ್ಯಕ್ಷ ಡಾ. ಕೆ. ಕೆ. ಅಗರ್ವಾಲ್ ವಿಧಿವಶರಾಗಿದ್ದಾರೆ. ಕೋವಿಡ್ ಸೋಂಕು ತಗುಲಿದ್ದ ಅವರು ಹಲವು ದಿನಗಳಿಂದ ವೆಂಟಿಲೇಟರ್ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

62 ವರ್ಷದ ಡಾ. ಕೆ. ಕೆ. ಅಗರ್ವಾಲ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕೋವಿಡ್ ಸೋಂಕು ತಗುಲಿದ ಬಳಿಕ ಹಲವು ದಿನದಿಂದ ಅವರು ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಹೃದ್ರೋಗ ತಜ್ಞರಾಗಿದ್ದ ಡಾ. ಕೆ. ಕೆ. ಅಗರ್ವಾಲ್ ಹಾರ್ಟ್ ಕೇರ್ ಫೌಂಡೇಷನ್‌ ಆಫ್ ಇಂಡಿಯಾದ ಮುಖ್ಯಸ್ಥರಾಗಿದ್ದರು. 2005ರಲ್ಲಿ ಡಾ. ಬಿಸಿ ರಾಯ್ ಪ್ರಶಸ್ತಿ, 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದರು.

ದೆಹಲಿಯಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದ ಡಾ. ಕೆ. ಕೆ. ಅಗರ್ವಾಲ್, ನಾಗ್ಪುರ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಪದವಿ ಪಡೆದಿದ್ದರು. ಕಳೆದ ವರ್ಷದಿಂದ ಕೋವಿಡ್ ಕುರಿತು ಹಲವಾರು ವಿಡಿಯೋಗಳನ್ನು ಮಾಡಿ ಅವರು ಟ್ವೀಟ್‌ ಮಾಡುತ್ತಿದ್ದರು.

ಡಾ. ಕೆ. ಕೆ. ಅಗರ್ವಾಲ್ ಅವರ ಟ್ವಿಟರ್ ಖಾತೆಯಲ್ಲಿ ಸಂತಾಪವನ್ನು ಸೂಚಿಸಲಾಗಿದ್ದು, ಸೋಮವಾರ ರಾತ್ರಿ 11.30ಕ್ಕೆ ಅವರು ಮೃತಪಟ್ಟಿದ್ದಾರೆ ಎಂದು ಮಾಹಿತಿಯನ್ನು ನೀಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img