Monday, June 14, 2021
Homeಅಂತರ್ ರಾಜ್ಯರಾಜಸ್ತಾನ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ ಕೋವಿಡ್ ನಿಂದ ನಿಧನ

ಇದೀಗ ಬಂದ ಸುದ್ದಿ

ರಾಜಸ್ತಾನ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ ಕೋವಿಡ್ ನಿಂದ ನಿಧನ

ಜೈಪುರ: ರಾಜಸ್ತಾನದ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.ಅವರಿಗೆ 89 ವರ್ಷ ವಯಸ್ಸಾಗಿತ್ತು.

ಮಾಜಿ ಸಿಎಂ ಜಗನ್ನಾಥ್ ಪಹಾಡಿಯಾ ಅವರ ನಿಧನಕ್ಕೆ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಸಂತಾಪ ಸೂಚಿಸಿದ್ದಾರೆ.

ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಜಗನ್ನಾಥ್ ಪಹಾಡಿಯಾ ಅವರ ನಿಧನದ ಸುದ್ದಿ ಕೇಳಿ ನನಗೆ ಆಘಾತವಾಯಿತು ಎಂದು ಸಿಎಂ ಅಶೋಕ್ ಗೆಹ್ಲೊಟ್ ಟ್ವೀಟ್ ಮಾಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ರಾಜಸ್ತಾನ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರ ಸುದೀರ್ಘ ರಾಜಕೀಯ ಮತ್ತು ಆಡಳಿತಾತ್ಮಕ ವೃತ್ತಿ ಬದುಕಿನಲ್ಲಿ ಸಮಾಜದ ಸಬಲೀಕರಣಕ್ಕೆ ಹಲವು ಗುರುತರ ಕೊಡುಗೆಗಳನ್ನು ನೀಡಿದ್ದರು, ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಮತ್ತು ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಧಾನಿ ಮೋದಿ ಕೋರಿದ್ದಾರೆ.

1980-81ರಲ್ಲಿ ರಾಜಸ್ತಾನದ ಮುಖ್ಯಮಂತ್ರಿಯಾಗಿದ್ದ ಪಹಾಡಿಯಾ ನಂತರದ ದಿನಗಳಲ್ಲಿ ಹರ್ಯಾಣ ಮತ್ತು ಬಿಹಾರದ ಗವರ್ನರ್ ಕೂಡ ಆಗಿದ್ದರು.

ರಾಜಸ್ತಾನ ಸರ್ಕಾರ ಶ್ರದ್ಧಾಂಜಲಿ: ಪಹಾಡಿಯಾ ಅವರ ನಿಧನ ಹಿನ್ನೆಲೆಯಲ್ಲಿ ರಾಜಸ್ತಾನ ಸರ್ಕಾರ ಇಂದು ಒಂದು ದಿನ ಶ್ರದ್ಧಾಂಜಲಿ ಆಚರಿಸಲಿದ್ದು ಈ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳು ಮುಚ್ಚಿರುತ್ತದೆ.ರಾಷ್ಟ್ರಧ್ವಜ ಅರ್ಧಕ್ಕೆ ಇಳಿಸಲಾಗುತ್ತದೆ.

ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಸಿ ಅಗಲಿದ ಚೇತನಕ್ಕೆ ಮೌನಾಚರಣೆ ನಡೆಸಲಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img