Monday, June 14, 2021
Homeಕೋವಿಡ್-19ವಿಜಯನಗರ ಜಿಲ್ಲೆಯ ಒಂದೇ ತಾಂಡದ 100 ಮಂದಿಗೆ ಕೊರೊನಾ

ಇದೀಗ ಬಂದ ಸುದ್ದಿ

ವಿಜಯನಗರ ಜಿಲ್ಲೆಯ ಒಂದೇ ತಾಂಡದ 100 ಮಂದಿಗೆ ಕೊರೊನಾ

ಹೊಸಪೇಟೆ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶ್ರೀಕಂಠಪುರ ತಾಂಡದ 8 ಮಕ್ಕಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಒಟ್ಟು ತಾಂಡದಲ್ಲಿ 100 ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ.

ಶ್ರೀಕಂಠಪುರ ತಾಂಡದ 8 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಡೀ ತಾಂಡದ ಜನರಿಗೆ ಆತಂಕ ಶುರುವಾಗಿದೆ. ಕಳೆದ ಕೆಲ ದಿನಗಳಲ್ಲಿ ತಾಂಡದ 100 ಜನರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಇಂದುಉ ಕೂಡ 20 ಜನರಿಗೆ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇನ್ನು ರಾಜ್ಯದಲ್ಲಿ ನಿನ್ನೆ ಒಂದೇ ದಿನ 34281 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 558890 ಕ್ಕೆ ಏರಿಕೆಯಾಗಿದೆ. ಅಲ್ಲದೇ ಸೋಂಕಿತರಾದಂತ 468 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 23306 ಕ್ಕೆ ಏರಿಕೆಯಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img