Tuesday, June 15, 2021
Homeದೇಶದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,76,070 ಜನರಲ್ಲಿ ಸೋಂಕು ಪತ್ತೆ, 3,874 ಮಂದಿ ಬಲಿ

ಇದೀಗ ಬಂದ ಸುದ್ದಿ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,76,070 ಜನರಲ್ಲಿ ಸೋಂಕು ಪತ್ತೆ, 3,874 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,76,070 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,57,72,400ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,874 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,87,122 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 31,29,878 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,23,55,440 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,69,077 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 18,70,09,792 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img