Tuesday, June 15, 2021
Homeಸುದ್ದಿ ಜಾಲಕೊಡಗಿನಲ್ಲಿ 8 ವೈದ್ಯರು ಸೇರಿ 31 ಆರೋಗ್ಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್!

ಇದೀಗ ಬಂದ ಸುದ್ದಿ

ಕೊಡಗಿನಲ್ಲಿ 8 ವೈದ್ಯರು ಸೇರಿ 31 ಆರೋಗ್ಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್!

ಕೊಡಗು ಮೇ. 21 : ಮಡಿಕೇರಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 8 ವೈದ್ಯರು ಹಾಗೂ ನರ್ಸ್, ಮೆಡಿಕಲ್ ಆಫಿಸರ್ಸ್ ಸೇರಿದಂತೆ ಒಟ್ಟು 31 ಜನರಿಗೆ ಕೊವಿಡ್ ಪಾಸಿಟಿವ್ ಸೋಂಕು ಹರಡಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ನಿತ್ಯ ನೂರಾರು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದು, ಮೆಡಿಕಲ್ ಕಾಲೇಜಿನಲ್ಲಿ ನೂರಾರು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಚಿಕಿತ್ಸೆ ನಡೆಸುತ್ತಿದ್ದ ವೈದ್ಯರು ಮತ್ತು ನರ್ಸ್ ಸೇರಿದಂತೆ ಒಟ್ಟು 31 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮೆಡಿಕಲ್ ಸೂಪರಿಡೆಂಟೆಂಡ್ ಲೋಕೇಶ್ ಅವರು ಆಸ್ಪತ್ರೆಯಲ್ಲಿ ಸಾಕಷ್ಟು ಒತ್ತಡದಿಂದ ಶ್ರಮ ವಹಿಸಿ ಕೆಲಸ ಮಾಡುತ್ತಿದ್ದೇವೆ. ಕೋವಿಡ್ ಆಸ್ಪತ್ರೆಯಲ್ಲಿ ಇನ್ಟೆನ್ ಶಿಫ್ ಸೇರಿದಂತೆ ಒಟ್ಟು 123 ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಲ್ಲಿ 8 ವೈದ್ಯರಿಗೆ ಪಾಸಿಟಿವ್ ದೃಢಪಟಿದ್ದು, ಪಾಸಿಟಿವ್ ಬಂದ ಎಲ್ಲರನ್ನೂ 14 ದಿನಗಳವರೆಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ. ಈ ಹಿಂದೆಯೂ ಸೋಂಕು ದೃಢಪಟ್ಟ ವೈದ್ಯರು ಮತ್ತು ಸಿಬ್ಬಂದಿಗೆ ಗುಣಮುಖರಾದ ಮೇಲೆ ಮತ್ತೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ ಎಂದಿದ್ದಾರೆ.

ಮತ್ತೊಂದೆಡೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇನ್ನೂ ಸಾಕಷ್ಟು ನಿಯಂತ್ರಣಕ್ಕೆ ಬರಬೇಕಾಗಿರುವುದರಿಂದ ಮೇ 25 ರ ನಂತರವೂ ಇನ್ನೂ 10 ದಿನಗಳ ಕಾಲ ಲಾಕ್ ಡೌನ್ ಮಾಡಲಾಗುವುದು ಎಂದು ಮಡಿಕೇರಿ ಬಿಜೆಪಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ

ಮಡಿಕೇರಿ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭ ಪ್ರತಿಕ್ರಿಯಿಸಿದ ಅವರು ರಾಜ್ಯದಲ್ಲಿ ಈ ಜಾರಿಯಲ್ಲಿರುವ ಲಾಕ್ ಡೌನ್ ಜಾರಿಗೆ ಬರುವ ಮುನ್ನವೆ ಕೊಡಗಿನಲ್ಲಿ ವಾರದಲ್ಲೇ ಎರಡು ದಿನ ಅಗತ್ಯ ವಸ್ತುಗಳ ಖರೀದಿಗೆ ಸಮಯ ನೀಡಿ ಲಾಕ್ ಡೌನ್ ಮಾಡಲಾಗಿತ್ತು. ಈಗ ವಾರದಲ್ಲಿ ಮೂರು ದಿನ ಮಾತ್ರವೇ ಬೆಳಿಗ್ಗೆ 6 ರಿಂದ 10 ವರೆಗೆ ಅಗತ್ಯ ವಸ್ತುಗಳ ಕೊಳ್ಳಲು ಅವಕಾಶ ನೀಡಿದ್ದೇವೆ. ಲಾಕ್ ಡೌನ್ ಮಾಡಿದ ಬಳಿಕ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಸ್ವಲ್ಪ ಕಡಿಮೆ ಆಗಿದೆ. ಅದನ್ನು ಇನ್ನಷ್ಟು ನಿಯಂತ್ರಿಸಬೇಕಾದರೆ ಇನ್ನೂ ಹತ್ತು ದಿನಗಳ ಲಾಕ್ ಡೌನ್ ಅಗತ್ಯವಿದೆ ಎಂದಿದ್ದಾರೆ.

ಕೊಡಗು ಕೋವಿಡ್ ಆಸ್ಪತ್ರೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ ಎನ್ನುವ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಕೊವಿಡ್ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೋವಿಡ್ ಆಸ್ಪತ್ರೆಯ ಪ್ರತೀ ವಾರ್ಡ್‍ಗೆ ತೆರಳಿದ ಜಿಲ್ಲಾಧಿಕಾರಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ.

ಅಷ್ಟೇ ಅಲ್ಲ ಪ್ರತೀ ರೋಗಿಗಳ ಸಮಸ್ಯೆಗಳನ್ನು ಆಲಿಸಿದ್ದಾರೆ. ಕೊವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭ ಕೊವಿಡ್ ರೋಗಿಗಳನ್ನು ನೋಡಲು ಅವರ ಸಂಬಂಧಿಕರು ವಾರ್ಡ್‍ಗಳಿಗೆ ಬಂದು ಹೋಗುತ್ತಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿ ಆಸ್ಪತ್ರೆಯ ಸಿಬ್ಬಂದಿ ಮತ್ತು ಡೀನ್ ಗೆ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ನಿಮಗೆ ಸಾಮರ್ಥ್ಯವಿಲ್ಲ ಎಂದರೇ ರಾಜೀನಾಮೆ ಕೊಟ್ಟು ಹೊರಟು ಹೋಗಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವುದು ತಿಳಿದು ಬಂದಿದೆ. ಆಸ್ಪತ್ರೆಯಿಂದ ಹೊರ ಬಂದ ಜಿಲ್ಲಾಧಿಕಾರಿ ಮಾಧ್ಯಮಗಳೊಂದಿಗೆ ಮಾತನಾಡಿ ಸೋಂಕಿತರ ಸಂಬಂಧಿಗಳು ಕೇವಲ ಬಟ್ಟೆ ಮಾಸ್ಕನ್ನು ಧರಿಸಿ ವಾರ್ಡ್‍ಗಳಿಗೆ ಬಂದು ಹೋಗುತ್ತಿರುವುದು ಗೊತ್ತಾಗಿದೆ. ಇದು ಅವರ ಇಡೀ ಕುಟುಂಬಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img