Monday, June 14, 2021
Homeಸುದ್ದಿ ಜಾಲಮಾಜಿ ಸ್ಪೀಕರ್ ಕೆ. ಆರ್. ಪೇಟೆ ಕೃಷ್ಣ ನಿಧನ

ಇದೀಗ ಬಂದ ಸುದ್ದಿ

ಮಾಜಿ ಸ್ಪೀಕರ್ ಕೆ. ಆರ್. ಪೇಟೆ ಕೃಷ್ಣ ನಿಧನ

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹಿರಿಯ ನಾಯಕ ಮೈಸೂರಿನ ಕುವೆಂಪು ನಗರ ನಿವಾಸದಲ್ಲಿ ನಿಧನರಾಗಿದ್ದಾರೆ. ಜೆಡಿಎಸ್ ನಿಂದ ಸ್ಪೀಕರ್ ಆಗಿ ನೇಮಕರಾಗಿದ್ದ ಕೆ.ಆರ್.ಪೇಟೆ ಕೃಷ್ಣ ಅವರು 2006ರಿಂದ 2008ರವರೆಗೆ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು.

ಅನಾರೋಗ್ಯದ ಕಾರಣದಿಂದಾಗಿ ಕೆಲ ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಮಾಜಿ ಸ್ಪೀಕರ್ ಅಗಲಿಕೆಗೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img