Tuesday, June 15, 2021
Homeಸುದ್ದಿ ಜಾಲಜೂನ್ 7 ರವರೆಗೆ ಕಠಿಣ ಲಾಕ್ ಡೌನ್ : ನಿಯಮ ಉಲ್ಲಂಘಿಸಿದ್ರೆ ನಿರ್ದಾಕ್ಷಿಣ್ಯ ಕ್ರಮ :...

ಇದೀಗ ಬಂದ ಸುದ್ದಿ

ಜೂನ್ 7 ರವರೆಗೆ ಕಠಿಣ ಲಾಕ್ ಡೌನ್ : ನಿಯಮ ಉಲ್ಲಂಘಿಸಿದ್ರೆ ನಿರ್ದಾಕ್ಷಿಣ್ಯ ಕ್ರಮ : ಪೊಲೀಸ್ ಆಯುಕ್ತ ಕಮಲ್ ಪಂತ್

ಬೆಂಗಳೂರು : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದು, ಈ ಬಾರಿ ಮುಲಾಜು ಇಲ್ಲ, ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ತೇವೆ ಎಂದು ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಯೊಂದು ವಾಹನಗಳನ್ನು ಪರಿಶೀಲನೆ ಮಾಡಿಸುತ್ತೇವೆ, ಟ್ರಾಫಿಕ್ ಹಾಗೂ ಸಿವಿಲ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಲಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.

ಅನಗತ್ಯವಾಗಿ ರಸ್ತೆಯಲ್ಲಿ ಓಡಾಡುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು, ಈ ಬಾರಿ ಟಫ್ ರೂಲ್ಸ್ ಜಾರಿಗೆ ತರಲಿದ್ದೇವೆ ಎಂದು ಹೇಳಿದರು.ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ.

ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ. ಬೆಳಿಗ್ಗೆ 9.45 ಆದ್ರೂ ನಂತ್ರವೂ ಜನರು ತಿರುಗಾಡುತ್ತಿದ್ದಾರೆ. ಇದಕ್ಕೆ ಇನ್ಮುಂದೆ ಅವಕಾಶ ಇಲ್ಲ. ಪೊಲೀಸರಿಗೆ ಸೂಚಿಸಲಾಗಿದೆ. ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಿಎಂ ಯಡಿಯೂರಪ್ಪ ವಾರ್ನ್ ಮಾಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img