Monday, June 14, 2021
Homeಸುದ್ದಿ ಜಾಲಆಹಾರ ದಿನಸಿ, ಹಣ್ಣುಗಳು, ತರಕಾರಿ ಕೊಳ್ಳಲು ಬೆಳಿಗ್ಗೆ 6ರಿಂದ 10 ಗಂಟೆವರೆಗೆ ಅವಕಾಶ : ಜಿಲ್ಲಾಧಿಕಾರಿ...

ಇದೀಗ ಬಂದ ಸುದ್ದಿ

ಆಹಾರ ದಿನಸಿ, ಹಣ್ಣುಗಳು, ತರಕಾರಿ ಕೊಳ್ಳಲು ಬೆಳಿಗ್ಗೆ 6ರಿಂದ 10 ಗಂಟೆವರೆಗೆ ಅವಕಾಶ : ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ

ಯಾದಗಿರಿ; ಮೇ 21 ಯಾದಗಿರಿ ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಅಗತ್ಯ ವಸ್ತುಗಳು ಸೇರಿ ಕೆಲ ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಚಟುವಟಿಕೆಗಳನ್ನು ಮೇ 22 ರಂದು ಬೆಳಿಗ್ಗೆ 6 ಗಂಟೆಯಿಂದ 24ರಂದು ಬೆಳಿಗ್ಗೆ 6 ಗಂಟೆವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ. ಆರ್ ಅವರು ಆದೇಶ ಹೊರಡಿಸಿದ್ದಾರೆ.

ಅಗತ್ಯ ವಸ್ತುಗಳಾದ ಹಾಲು, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬ್ಯುಲೆನ್ಸ್, ಅಗ್ನಿಶಾಮಕ, ಪೆಟ್ರೋಲ್ ಪಂಪ್, ನೀರು, ನೈರ್ಮಲ್ಯ ಇತರೆ ತುರ್ತು ವೈದ್ಯಕೀಯ ಸೇವೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಉಳಿದಂತೆ ಆಹಾರ ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತುಗಳು, ಮಾಂಸ ಮತ್ತು ಮೀನು, ಪ್ರಾಣಿಗಳ ಮೇವುಗಳೊಂದಿಗೆ ವ್ಯವಹರಿಸುವ ಅಂಗಡಿಗಳಿಗೆ ಬೆಳಿಗ್ಗೆ 6ರಿಂದ ಬೆಳಿಗ್ಗೆ 10 ಗಂಟೆವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯ ನ್ಯಾಯಬೆಲೆ ಅಂಗಡಿಗಳು, ಬೆಳಿಗ್ಗೆ 6 ರಿಂದ ಬೆಳಿಗ್ಗೆ 10ರ ವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿರುತ್ತದೆ. ಈ ಎಲ್ಲಾ ಚಟುಚಟಿಕೆಗಳು ಕೋವಿಡ್-19 ರಾಷ್ಟಿಯ ನಿರ್ದೇಶನಗಳ ಷರತ್ತುಗಳ ಅನ್ವಯ ಕಾರ್ಯನಿರ್ವಹಿಸಲಿವೆ.

ಉಳಿದ ಎಲ್ಲಾ ಚಟುವಟಿಕೆಗಳನ್ನು ವಿಪತ್ತು ನಿರ್ವಹಣಾ ಕಾಯ್ದೆ-2005ರ 34(ಎಂ) ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿರ್ಬಂಧಿಸಿ ಈ ಆದೇಶವನ್ನು ಹೊರಡಿಸಿರುವುದಾಗಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ. ಆರ್ ಅವರು ತಿಳಿಸಿದ್ದಾರೆ.

ಸಾರ್ವಜನಿಕ ಅಥವಾ ಖಾಸಗಿ ಬಸ್‌ಗಳ ಅಥವಾ ಪ್ರಮಾಣಿಕರ ವಾಹನಗಳ ಯಾವುದೇ ಸಂಚಾರ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ದಿನಾಂಕ: 22-05-2021 ಬೆಳಿಗ್ಗೆ 6ರಿಂದ ದಿನಾಂಕ:24-05-2021 ಬೆಳಿಗ್ಗೆ 6 ಗಂಟೆಯವರೆಗೆ ಮದ್ಯಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸದರಿ ಅವಧಿಯಲ್ಲಿ ಭಾರತ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 133,144(3)ರ ಪ್ರಕಾರ ಹಾಗೂ ದಿ ಎಡಿಡೆಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಶನ್ಸ್-2020ರ ನಿಯಮ 12ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸುತ್ತಾ ಯಾದಗಿರಿ ಜಿಲ್ಲೆಯಾದ್ಯಂತ 04 ಜನಕ್ಕಿಂತ ಹೆಚ್ಚಿನ ಜನ ಸೇರದಂತೆ ಜಿಲ್ಲೆಯಾದ್ಯಂತ ಭಾರತ ದಂಡ ಪ್ರಕ್ರಿಯೆ ಸಂಹಿತೆ1973ರ ಕಲಂ 144 ಅನ್ನು ಜಾರಿಗೊಳಿಸಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಕುದಾನ್ ಸಾಬ್

ವಿ ನ್ಯೂಸ್ 24ಕನ್ನಡ ಯಾದಗಿರಿ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img