Tuesday, June 15, 2021
Homeಜಿಲ್ಲೆದೇಶದಲ್ಲಿ 2,22,315 ಸೋಂಕು ಪತ್ತೆ, 4454 ಮಂದಿ ಕೊರೊನಾಗೆ ಬಲಿ!

ಇದೀಗ ಬಂದ ಸುದ್ದಿ

ದೇಶದಲ್ಲಿ 2,22,315 ಸೋಂಕು ಪತ್ತೆ, 4454 ಮಂದಿ ಕೊರೊನಾಗೆ ಬಲಿ!

 ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,22,315 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 4454 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 3 ಲಕ್ಷ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಕೊರೊನಾ ಸೋಂಕು ಪ್ರಕರಣಗಳು ಕಡಿಮೆ ಆಗುತ್ತಿದ್ದರೂ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದ್ದು, ಆತಂಕ ಕಡಿಮೆ ಆಗುತ್ತಿಲ್ಲ.

ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,67,52,447ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 3,03,720ಕ್ಕೆ ಜಿಗಿದಿದೆ. ಈ ಮೂಲಕ ಕೊರೊನಾಗೆ ಅತೀ ಹೆಚ್ಚು ಬಲಿಯಾದ ದೇಶಗಳ ಪಟ್ಟಿಯಲ್ಲಿ ಭಾರತ 3ನೇ ಸ್ಥಾನ ಪಡೆದಿದೆ.

ಒಂದು ದಿನದಲ್ಲಿ 3,02,544 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 2,37,28,011ಕ್ಕೆ ಜಿಗಿತ ಕಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 27,20,716ಕ್ಕೆ ಇಳಿದಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img