Tuesday, June 15, 2021
Homeಕೋವಿಡ್-19ಕೊರೊನಾ ಸೋಂಕಿಗೆ 11 ವರ್ಷದ ಬಾಲಕಿ ಬಲಿ

ಇದೀಗ ಬಂದ ಸುದ್ದಿ

ಕೊರೊನಾ ಸೋಂಕಿಗೆ 11 ವರ್ಷದ ಬಾಲಕಿ ಬಲಿ

ಕೊಪ್ಪಳ; ರಾಜ್ಯದಲ್ಲಿ ಕೊರೊನಾ ಸೋಂಕು ಅಪಾಯಕಾರಿಯಾಗಿ ಹರಡುತ್ತಿದ್ದು, ಚಿಕ್ಕ ಮಕ್ಕಳು ಕೂಡ ಮಹಾಮಾರಿಗೆ ಬಲಿಯಾಗುತ್ತಿದ್ದು, 11 ವರ್ಷದ ಬಾಲಕಿಯೊಬ್ಬಳು ಇದೀಗ ಕೋವಿಡ್ ನಿಂದ ಮೃತಪಟ್ಟಿದ್ದಾಳೆ.

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ 11 ವರ್ಷದ ಬಾಲಕಿ ಮಾನಸ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ. ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಇಂದು ಬೆಳಿಗ್ಗೆಯಷ್ಟೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ವೆಂಟಿಲೇಟರ್ ನಲ್ಲಿಯೇ ಸಾವನ್ನಪ್ಪಿದ್ದಾಳೆ.

ರಾಜ್ಯದಲ್ಲಿ ಕೊರೊನಾ ಸೋಂಕು ಮಕ್ಕಳಲ್ಲಿ ಕೂಡ ಹರಡುತ್ತಿದ್ದು, ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಕೊರೊನಾ ಹೆಚ್ಚು ಅಪಾಯಕಾರಿಯಾಗಿದೆ ಎಂಬುದು ತಜ್ಞರ ಅಭಿಪ್ರಾಯ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img