Tuesday, June 15, 2021
Homeಸುದ್ದಿ ಜಾಲರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಸಂಕಷ್ಟದಲ್ಲಿರುವವರಿಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ.

ಸರ್ಕಾರದ ಪರಿಹಾರ ಪ್ಯಾಕೇಜ್ ನಡಿ ನೆರವು ಪಡೆಯಲು ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕಿಲ್ಲ. ಅರ್ಜಿ ಇಲ್ಲದೆ ಪರಿಹಾರ ರೈತರ ಖಾತೆಗ ಪರಿಹಾರದ ಹಣ ಜಮಾ ಮಾಡಲಾಗುವುದು.

ಇ-ಆಡಳಿತ ಇಲಾಖೆಯಲ್ಲಿ ತರಕಾರಿ, ಹಣ್ಣು ಮತ್ತು ಹೂವು ಬೆಳೆಗಾರರ ದತ್ತಾಂಶ ಆಧರಿಸಿ ಅವರ ಬ್ಯಾಂಕ್ ಖಾತೆಗೆ ಪರಿಹಾರ ಹಣ ವರ್ಗಾವಣೆ ಮಾಡಲಾಗುತ್ತದೆ. ಕಂದಾಯ ಇಲಾಖೆಯಲ್ಲಿ ಪ್ರತಿ ರೈತರ ಭೂ ದಾಖಲೆ ಮತ್ತು ಬೆಳೆ ಕುರಿತ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಇದರೊಂದಿಗೆ ರೈತರ ಆಧಾರ್ ಮತ್ತು ಬ್ಯಾಂಕ್ ಖಾತೆಯ ಮಾಹಿತಿಯೂ ಲಭ್ಯವಿದ್ದು, ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸಂತ್ರಸ್ತರಾದ ರೈತರಿಗೆ ಈ ಸೌಲಭ್ಯ ಸಿಗಲಿದೆ.

ಸರ್ಕಾರದ ಅನೇಕ ಸೌಲಭ್ಯಗಳನ್ನು ನೇರ ವರ್ಗಾವಣೆ ಮೂಲಕ ರೈತರ ಖಾತೆಗೆ ಸಂದಾಯ ಮಾಡುತ್ತಿದ್ದು, ಕಳೆದ ಬಾರಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದ ಪರಿಹಾರವನ್ನು ಕೂಡ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img