Monday, June 14, 2021
Homeಸುದ್ದಿ ಜಾಲದೇಶದಲ್ಲಿ ಒಂದೇ ದಿನ 1,27,510 ಮಂದಿಗೆ ಕೊರೊನಾ ಸೋಂಕು

ಇದೀಗ ಬಂದ ಸುದ್ದಿ

ದೇಶದಲ್ಲಿ ಒಂದೇ ದಿನ 1,27,510 ಮಂದಿಗೆ ಕೊರೊನಾ ಸೋಂಕು

ನವದೆಹಲಿ: ದೇಶದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 1,27,510 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನ 2,795 ಸೋಂಕಿತರು ಸಾವನ್ನಪ್ಪಿದ್ದು, 2,55,287 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ಇನ್ನು ದೇಶದಲ್ಲಿ ಈವೆರೆಗೆ ಒಟ್ಟು 2,81,75,044 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಈ ಪೈಕಿ 3,31,895 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 18,95,520 ಸಕ್ರೀಯ ಪ್ರಕರಣಗಳಿದ್ದು 2,59,47,629 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.

ಕೊರೊನಾ ಹರಡುವಿಕೆ ನಿಯಂತ್ರಣಕ್ಕಾಗಿ ಒಟ್ಟಾರೆ ದೇಶದಲ್ಲಿ ಈವರೆಗೆ 21,60,46,638 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img