Tuesday, June 15, 2021
Homeಸುದ್ದಿ ಜಾಲರಾಜ್ಯದ ಖಾಸಗಿ ಶಾಲಾ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ರಾಜ್ಯದ ಖಾಸಗಿ ಶಾಲಾ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಲಾಕ್ ಡೌನ್ ನಿಂದಾಗಿ ಶಾಲಾ-ಕಾಲೇಜುಗಳು ಮುಚ್ಚಲ್ಪಟ್ಟಿವೆ. ಇದರಿಂದಾಗಿ ಶಾಲಾ-ಕಾಲೇಜು ಶಿಕ್ಷಕರು, ಉಪನ್ಯಾಸಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವಂತ ಖಾಸಗಿ ಶಾಲಾ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನೀಡಲಿದೆ ಎನ್ನಲಾಗುತ್ತಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಶಾಲಾ-ಕಾಲೇಜುಗಳು ಲಾಕ್ ಡೌನ್ ನಿಂದಾಗಿ ಬಂದ್ ಆಗಿರುವ ಕಾರಣದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವಂತ ಶಿಕ್ಷಕರು, ಉಪನ್ಯಾಸಕರಿಗೆ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಹಾಗೂ ಐಇಟಿ ಅಭ್ಯರ್ಥಿಗಳ ಪರೀಕ್ಷಾ ಶುಲ್ಕವನ್ನು ಬಳಸಿಕೊಳ್ಳಲಿದೆ ಎನ್ನಲಾಗುತ್ತಿದೆ.

ಇದಷ್ಟೇ ಅಲ್ಲದೇ ಶಿಕ್ಷಕರ ಕಲ್ಯಾಣ ನಿಧಿ, ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ, ಪಿಯು ಇಲಾಖೆಗೆ ನೀಡಿರುವ ಅನುದಾನದಿಂದ ಬಾಕಿ ಉಳಿದ ಹಣವನ್ನು ಬಳಸಿಕೊಂಡು, ವಿಶೇಷ ಪ್ಯಾಕೇಜ್ ಮೂಲಕ, ಸಂಕಷ್ಟದಲ್ಲಿರುವಂತ ಅನುದಾನಿತ ಶಾಲೆಗಳ ಶಿಕ್ಷಕರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ನೀಡಲಿದೆ ಎನ್ನಲಾಗಿದೆ. ಆ ಬಗ್ಗೆ ಸದ್ಯದಲ್ಲಿಯೇ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ ಹೊರ ಬೀಳಲಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img