Monday, June 14, 2021
Homeಸುದ್ದಿ ಜಾಲ'ಯಸ್‌ ಚಂಡಮಾರುತ'ದಿಂದ 2.21 ಲಕ್ಷ ಹೆಕ್ಟೆರ್ ಬೆಳೆ ಹಾನಿ: ಸಿಎಂ ಮಮತಾ ಬ್ಯಾನರ್ಜಿ

ಇದೀಗ ಬಂದ ಸುದ್ದಿ

‘ಯಸ್‌ ಚಂಡಮಾರುತ’ದಿಂದ 2.21 ಲಕ್ಷ ಹೆಕ್ಟೆರ್ ಬೆಳೆ ಹಾನಿ: ಸಿಎಂ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಕಳೆದ ವಾರ ಪಶ್ಚಿಮ ಬಂಗಾಳ ರಾಜ್ಯಕ್ಕೆ ಅಪ್ಪಳಿಸಿದ ‘ಯಸ್‌’ ಚಂಡಮಾರುತದಿಂದಾಗಿ ಒಟ್ಟು ₹20 ಸಾವಿರ ಕೋಟಿಗಳಷ್ಟು ನಷ್ಟವಾಗಿದ್ದು, 2.21 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಚಂಡಮಾರುತದಿಂದಾಗಿ 2 ಲಕ್ಷಕ್ಕೂ ಹೆಚ್ಚು ಜನರು ನಿರ್ವಸಿತರಾಗಿದ್ದಾರೆ. ನಿರಾಶ್ರಿತರಿಗಾಗಿ ರಾಜ್ಯ ಸರ್ಕಾರ ಸುಮಾರು 1,200 ಪರಿಹಾರ ಕೇಂದ್ರಗಳನ್ನು ತೆರೆದಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಚಂಡಮಾರುತದಿಂದ ಉಂಟಾಗಿರುವ ಹಾನಿ ಕುರಿತು ಮಮತಾ ಅವರು ಮೇ 28ರಂದು ಪ್ರಧಾನಿಯವರಿಗೆ ವರದಿ ಸಲ್ಲಿಸಿದ್ದು, ಹಾನಿಗೊಳಗಾದ ಪ್ರದೇಶಗಳ ಪುನರ್ ಅಭಿವೃದ್ಧಿಗಾಗಿ ₹20 ಸಾವಿರ ಕೋಟಿ ನೀಡಬೇಕೆಂದು ಮನವಿ ಮಾಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img