Monday, June 14, 2021
Homeಸುದ್ದಿ ಜಾಲಪ.ಬಂಗಾಳದಲ್ಲಿ ಫಲಿತಾಂಶದ ನಂತರ 37 ಬಿಜೆಪಿ ಕಾರ್ಯಕರ್ತರ ಹತ್ಯೆ: ದಿಲೀಪ್ ಘೋಷ್

ಇದೀಗ ಬಂದ ಸುದ್ದಿ

ಪ.ಬಂಗಾಳದಲ್ಲಿ ಫಲಿತಾಂಶದ ನಂತರ 37 ಬಿಜೆಪಿ ಕಾರ್ಯಕರ್ತರ ಹತ್ಯೆ: ದಿಲೀಪ್ ಘೋಷ್

ಕೋಲ್ಕತ್ತಾ, ಜೂನ್ 02: ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ 37 ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಗೋಷ್ ಆರೋಪಿಸಿದ್ದಾರೆ.

ಪಕ್ಷದ ಕೆಲಸಗಳಿಗಾಗಿ ಮನೆಯಿಂದ ತೆರಳುವ ಬಿಜೆಪಿ ಕಾರ್ಯಕರ್ತರಿಗೆ ತಾವು ಮನೆಯಿಂದ ವಾಪಸಾಗುತ್ತೇವೆ ಎನ್ನುವ ನಂಬಿಕೆ ಇರುವುದಿಲ್ಲ, ರಾಜ್ಯದಲ್ಲಿ ಅಂತಹ ಪರಿಸ್ಥಿತಿ ಇದೆ, ಕಳೆದ 5 ವರ್ಷಗಳಲ್ಲಿ 166 ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಂದ ನಂತರ ಸ್ಥಿತಿಗತಿ ಕುರಿತು ಪರಾಮರ್ಶೆ ನಡೆಸಲು ಉತ್ತರ ಪ್ರದೇಶದ ಬಿಜೆಪಿ ಘಟಕದ ಜತೆ ಆಯೋಜಿಸಲಾಗಿದ್ದ ವರ್ಚ್ಯುವಲ್ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಪಕ್ಷದ ಉತ್ತರ ಪ್ರದೇಶ ಘಟಕದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳಿಗೆ ಘೋಷ್ ಕೃತಜ್ಞತೆ ಸಲ್ಲಿಸಿದ್ದು, ಇವರ ಶ್ರಮದಿಂದಾಗಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಪಕ್ಷವು 77 ಸ್ಥಾನಗಳನ್ನು ಗೆಲ್ಲುವಂತಾಗಿದೆ ಎಂದರು.

ವರ್ಚ್ಯುವಲ್ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಉಸ್ತುವಾರಿ ರಾಧಾಮೋಹನ್ ಸಿಂಗ್, ಬಿಜೆಪಿಯ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಭಾಗವಹಿಸಿದ್ದರು.

ಐದು ವರ್ಷಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ 30,000ದಷ್ಟು ಪ್ರಕರಣಗಳು ದಾಖಲಾಗಿದೆ ಎಂದರು.

ಆಧ್ಯಾತ್ಮಿಕ ಮುಖಂಡರು, ಕ್ರಾಂತಿಕಾರಿಗಳು, ಸಮಾಜ ಸುಧಾಕರಕರಿಂದ ಗುರುತಿಸಲ್ಪಟ್ಟಿರುವ ಪಶ್ಚಿಮ ಬಂಗಾಳವು ಇಂದು ದುರದೃಷ್ಟವಶಾತ್ ರಕ್ತಪಾತವನ್ನು ಎದುರಿಸುತ್ತಿದೆ ಎಂದು ಘೋಷ್ ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img