Monday, June 14, 2021
Homeದೇಶದೇಶದಲ್ಲಿಂದು 1.32 ಲಕ್ಷ ಹೊಸ ಕೊರೋನಾ ಕೇಸ್ ಪತ್ತೆ, 2,713 ಮಂದಿ ಸಾವು

ಇದೀಗ ಬಂದ ಸುದ್ದಿ

ದೇಶದಲ್ಲಿಂದು 1.32 ಲಕ್ಷ ಹೊಸ ಕೊರೋನಾ ಕೇಸ್ ಪತ್ತೆ, 2,713 ಮಂದಿ ಸಾವು

ನವದೆಹಲಿ: ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶುಕ್ರವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,32,364 ಕೇಸ್ ದಾಖಲಾಗಿವೆ. ಅಲ್ಲದೆ, 2,713 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,85,74,350ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,40,702ಕ್ಕೆ ತಲುಪಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,35,993ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,07,071 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,65,97,655ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 20,75,428 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 35,74,33,846 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 22,41,09,448 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img