Tuesday, June 15, 2021
Homeಸುದ್ದಿ ಜಾಲಕೊರೊನಾ ಆಸ್ಪತ್ರೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು

ಇದೀಗ ಬಂದ ಸುದ್ದಿ

ಕೊರೊನಾ ಆಸ್ಪತ್ರೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಮರಣಮೃದಂಗ ಬಾರಿಸುತ್ತಲೇ ಇದೆ. ಲೆಕ್ಕವಿಲ್ಲದಷ್ಟು ಸೋಂಕಿತರಿಗೆ ಸಮಯಕ್ಕೆ ಸರಿಯಾಗಿ ಆಸ್ಪತ್ರೆ ಬಳಿ ಬೆಡ್​, ಆಕ್ಸಿಜನ್​, ವೆಂಟಿಲೇಟರ್ ಬೆಡ್​​, ಔಷಧ, ರೆಮಿಡಿಸಿವರ್​ ಇಂಜಕ್ಷನ್​ ಸಿಗದೆ ಸಾ‌ ಯು ತ್ತಿದ್ದಾರೆ. ಇಂತಹ ಸಂಕಷ್ಟ ಕಾಲದಲ್ಲೂ ಇಲ್ಲೊಂದು ಜೋಡಿ ಅಮಾನವೀಯವಾಗಿ ವರ್ತಿಸಿ ಜೈಲು ಸೇರಿದ್ದಾರೆ.

ಹುಬ್ಬಳ್ಳಿಯ ವೆಂಕಟೇಶ್ವರ ಕಾಲನಿಯ ಸಿದ್ದನಗೌಡಾ ಪಾಟೀಲ್ ಮತ್ತು ವಿನಾಯಕನಗರದ ರಿಯಾ ಬಂಧಿತರು. ಸುಚಿರಾಯು ಆಸ್ಪತ್ರೆಯಲ್ಲಿ ಕ್ಲೀನರ್​ ಆಗಿ ಸಿದ್ದನಗೌಡ ಕೆಲಸ ಮಾಡುತ್ತಿದ್ದ. ಹುಬ್ಬಳ್ಳಿ ನಗರದ ತತ್ವದರ್ಶಿ ಆಸ್ಪತ್ರೆಯ ನರ್ಸ್ ರಿಯಾ. ಪ್ರೇಮಿಗಳಾದ ಇವರಿಬ್ಬರೂ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡಬೇಕಿದ್ದ ರೆಮಿಡಿಸಿವರ್ ಇಂಜೆಕ್ಷನ್​ಗಳನ್ನು ಕದ್ದು ಅಕ್ರಮವಾಗಿ ಹೆಚ್ಚಿನ ದರಕ್ಕೆ ಮಾರಲು ಹೋಗಿ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹುಬ್ಬಳ್ಳಿಯ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img