Tuesday, June 15, 2021
Homeಜಿಲ್ಲೆಕೋಲಾರಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ 'ವಿಶ್ವ ಪರಿಸರ' ದಿನ...

ಇದೀಗ ಬಂದ ಸುದ್ದಿ

ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ‘ವಿಶ್ವ ಪರಿಸರ’ ದಿನ ಆಚರಣೆ

ಕೋಲಾರ : ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹಿರಿಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು.

ವೃತ್ತ ನಿರೀಕ್ಷಕ ರಂಗಸ್ವಾಮಿ ರವರು ಸಂಚಾರಿ ಸಿಬ್ಬಂದಿಗಳೊಂದಿಗೆ ಠಾಣೆಯ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ನಾವುಗಳು ಕೇವಲ ವಿಶ್ವ ಪರಿಸರ ದಿನಾಚರಣೆಯ ದಿನದಿಂದಷ್ಟೇ ಸಸಿಗಳನ್ನು ನೆಡುವುದರ ಜೊತೆಗೆ ಸಾರ್ವಜನಿಕರು ತಮ್ಮ ಮನೆಗಳ ಹಾಗೂ ರಸ್ತೆಗಳ ಇಕ್ಕೆಳೆಗಳಲ್ಲಿ ಸಸಿಗಳನ್ನು ನೆಟ್ಟು ತಾಯಿಯಂತೆ ಪ್ರೀತಿಸಿ ಬೆಳೆಸಬೇಕು ಹಾಗಾದಾಗ ಮಾತ್ರ ಮುಂದಿನ ದಿನಗಳಲ್ಲಿ ಆಕ್ಸಿಜನ್ ಕೊರತೆಯನ್ನು ನೀಗಿಸಬಹುದು ಎಂದರು. ಈ ಸಂದರ್ಭದಲ್ಲಿ ಪಿಎಸ್ಐ ನಾರಾಯಣಸ್ವಾಮಿ ಮತ್ತು ಸಿಬ್ಬಂದಿಗಳಾದ ವಾಸುದೇವಮೂರ್ತಿ ವಿಜಯ್ ಕುಮಾರ್ ಕವಿರಾಜ್ ನಾರಾಯಣಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img