Monday, June 14, 2021
Homeಸುದ್ದಿ ಜಾಲCM ಯಡಿಯೂರಪ್ಪ ರಾಜೀನಾಮೆ‌ ಹೇಳಿಕೆ ಹಿಂದೆ ಬೇರೆಯದೇ ತಂತ್ರವಿದೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ

ಇದೀಗ ಬಂದ ಸುದ್ದಿ

CM ಯಡಿಯೂರಪ್ಪ ರಾಜೀನಾಮೆ‌ ಹೇಳಿಕೆ ಹಿಂದೆ ಬೇರೆಯದೇ ತಂತ್ರವಿದೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ

 ಬೆಂಗಳೂರು : ‘ರಾಜಕಾರಣದಲ್ಲಿ ನಾನಾ ತಂತ್ರಗಾರಿಕೆಗಳಿರುತ್ತವೆ. ಹಾಗೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ರಾಜೀನಾಮೆ ಕುರಿತ ಹೇಳಿಕೆ ಹಿಂದೆ ಬೇರೆಯದೇ ತಂತ್ರ ಇದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಸಿಎಂ ರಾಜೀನಾಮೆ ಮಾತಿನ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ರಾಜಕಾರಣಿದಲ್ಲಿ ಬಹಳ ತಂತ್ರಗಳಿರುತ್ತವೆ. ಹೇಳುವುದೊಂದು ಇದ್ದರೆ, ಮಾಡುವುದು ಮತ್ತೊಂದು ಇರುತ್ತದೆ. ಯಡಿಯೂರಪ್ಪ ಅವರದ್ದು ಬೇರೆಯದೇ ತಂತ್ರವಿದೆ. ರಾಜ್ಯ ಹಾಗೂ ಬಿಜೆಪಿ ರಾಜಕಾರಣದಲ್ಲಿ ಯಡಿಯೂರಪ್ಪ ಅವರು ಗಟ್ಟಿ ನಾಯಕ. ಅವರ ನಾಯಕತ್ವದಲ್ಲಿ ಚುನಾವಣೆ ನಡೆದಿದೆ. ಅವರ ನಾಯಕತ್ವದಲ್ಲೇ ನಮ್ಮ ಪಕ್ಷದ ಸ್ನೇಹಿತರನ್ನು ಕರೆದುಕೊಂಡು ಹೋಗಿ, ಸರಕಾರ ಮಾಡಿದ್ದಾರೆ ಎಂದಿದ್ದಾರೆ.

ಈಗ ಅವರನ್ನು ಬದಲಿಸುವ ನಿರ್ಧಾರ ಅವರ ಪಕ್ಷಕ್ಕೆ ಸಂಬಂಧಿಸಿದ್ದು. ನಮಗೂ ಅದಕ್ಕೂ ಸಂಬಂಧ ಇಲ್ಲ. ನನ್ನ ಪ್ರಕಾರ ಯಡಿಯೂರಪ್ಪ ಅವರು ಗಟ್ಟಿ ಮನುಷ್ಯ, ಅಷ್ಟು ಸಲೀಸಾಗಿ ಅವರು ಜಗ್ಗಲ್ಲ. ಏನೇನಾಗುತ್ತೆ ಕಾದು ನೋಡೋಣ ಎಂದರು.

ಜನ ಒಪ್ಪೋದು ಬಿಡೋದು ಬೇರೆ ವಿಚಾರ. ನಾವು ವಿರೋಧ ಪಕ್ಷವಾಗಿ ಏನು ಬೇಕಾದರೂ ಹೇಳಬಹುದು. ಆಡಳಿತ ವೈಫಲ್ಯ, ಆಂತರಿಕ ಬಿಕ್ಕಟ್ಟು, ಏಳೆಂಟು ನಾಯಕರು ತಾವೇ ಸಿಎಂ ಆಗಬೇಕು ಅಂತಾ ಸಿದ್ಧವಾಗಿದ್ದಾರೆ. ಮುಂದೆ ಯಡಿಯೂರಪ್ಪನವರೇ ಸಿಎಂ ಎನ್ನುವವರು, ಹಿಂದೆ ತಾವೇ ಸೂಟ್ ಹೊಲಿಸಿ, ಮುಹೂರ್ತ ಇಟ್ಟುಕೊಂಡು ರೆಡಿಯಾಗಿದ್ದಾರೆ. ಎಲ್ಲವೂ ನಮಗೆ ಗೊತ್ತಿದೆ ಎಂದು ಹೇಳಿದರು.

ದುರ್ದೈವ ಏನೆಂದರೆ, ಬಿಜೆಪಿಯವರು ಶಿಸ್ತು ಕಳೆದುಕೊಂಡಿದ್ದಾರೆ. ಯಡಿಯೂರಪ್ಪ ಅವರ ಹೇಳಿಕೆಯನ್ನು ಎರಡು ಮೂರು ರೀತಿಯಲ್ಲಿ ಬೇಕಾದರೂ ವಿಶ್ಲೇಷಣೆ ಮಾಡಬಹುದು. ನನ್ನನ್ನು ಮುಟ್ಟಿ ನೋಡಿ ಅಂತಾ ಎಚ್ಚರಿಕೆ ಇರಬಹುದು, ನಾನು ಶಿಸ್ತಿನ ಸಿಪಾಯಿ ಅಂತಾನೂ ಇರಬಹುದು. ನೀವು ಹೇಗೆ ವಿಶ್ಲೇಷಣೆ ಮಾಡುತ್ತೀರೋ ಮಾಡಿ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img