Tuesday, June 15, 2021
Homeದೇಶದೇಶದಲ್ಲಿ ಇಲ್ಲಿವರೆಗೆ 23.59 ಕೋಟಿ ಜನರಿಗೆ ಕೊರೋನಾ ಲಸಿಕೆ ವಿತರಣೆ : ಕೇಂದ್ರ...

ಇದೀಗ ಬಂದ ಸುದ್ದಿ

ದೇಶದಲ್ಲಿ ಇಲ್ಲಿವರೆಗೆ 23.59 ಕೋಟಿ ಜನರಿಗೆ ಕೊರೋನಾ ಲಸಿಕೆ ವಿತರಣೆ : ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ವಿರುದ್ಧ ಲಸಿಕಾ ಅಭಿಯಾನ ಆರಂಭವಾಗಿ ಇಲ್ಲಿವರೆಗೆ ಸೋಮವಾರ 31 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ವಿತರಣೆ ಸೇರಿ ಈವರೆಗೆ 23.59 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸೋಮವಾರ 18-44 ವರ್ಷದೊಳಗಿನ 16,07,531 ಫಲಾನುಭವಿಗಳು ತಮ್ಮ ಮೊದಲ ಡೋಸ್ ಲಸಿಕೆ ಪಡೆದರೆ, ಅದೇ ವಯಸ್ಸಿನ 68,661 ಫಲಾನುಭವಿಗಳು ತಮ್ಮ ಎರಡನೇ ಡೋಸ್ ಪಡೆದಿದ್ಧಾರೆ ಎಂದು ಸಚಿವಾಲಯ ತಿಳಿಸಿದೆ. ಒಟ್ಟಲ್ಲಿ ಮೂರನೇ ಹಂತದಲ್ಲಿ 3,02,45,100 ಜನರು ತಮ್ಮ ಮೊದಲ ಡೋಸ್ ಮತ್ತು 2,37,107 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಬಿಹಾರ, ದೆಹಲಿ, ಗುಜರಾತ್, ಹರಿಯಾಣ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು 18-44 ವರ್ಷ ವಯಸ್ಸಿನ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ನೀಡಿವೆ ಎಂದು ಅದು ಹೇಳಿದೆ. .

ಈವರೆಗೆ ದೇಶದಲ್ಲಿ ಲಸಿಕೆ ನೀಡಿಕೆಯ ಸಂಖ್ಯೆ 23.59 ಕೋಟಿ (23,59,39,165) ಮೀರಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img