Monday, June 14, 2021
Homeದೇಶ‘ಕೋವ್ಯಾಕ್ಸಿನ್’ ಲಸಿಕೆ ಪಡೆದ ಭಾರತೀಯರಿಗೆ ಸಿಹಿಸುದ್ದಿ

ಇದೀಗ ಬಂದ ಸುದ್ದಿ

‘ಕೋವ್ಯಾಕ್ಸಿನ್’ ಲಸಿಕೆ ಪಡೆದ ಭಾರತೀಯರಿಗೆ ಸಿಹಿಸುದ್ದಿ

ಕೊರೊನಾ ವೈರಸ್ ವಿರುದ್ಧ ಲಸಿಕೆ ಅಭಿಯಾನ ಭಾರತದಲ್ಲಿ ಚುರುಕು ಪಡೆದಿದೆ. ಪ್ರಧಾನಿ ನರೇಂದ್ರ ಮೋದಿ, ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಲಸಿಕೆ ನೀಡುವ ಘೋಷಣೆ ಮಾಡಿದ್ದಾರೆ. ಈ ಮಧ್ಯೆ ಕೊವ್ಯಾಕ್ಸಿನ್ ಲಸಿಕೆ ಪಡೆದ ಜನರಿಗೆ ಖುಷಿ ಸುದ್ದಿ ಸಿಕ್ಕಿದೆ. ಭಾರತ ಲಸಿಕೆ ಕೊವಾಕ್ಸಿನ್ ಬಗ್ಗೆ ಬ್ರೆಜಿಲ್ ರಾಷ್ಟ್ರೀಯ ಆರೋಗ್ಯ ಮಾನಿಟರಿಂಗ್ ಏಜೆನ್ಸಿ ಒಳ್ಳೆಯ ಸುದ್ದಿ ನೀಡಿದೆ. ಅನಿಸಾ, ಕೊವಾಕ್ಸಿನ್ ಲಸಿಕೆಯನ್ನು ಅನುಮೋದಿಸಿದೆ.

ಕೊವಾಕ್ಸಿನ್ ಪಡೆದವರಿಗೆ ಈ ವರ್ಷ ಸೆಪ್ಟೆಂಬರ್ ವೇಳೆಗೆ ವಿದೇಶಕ್ಕೆ ಹೋಗುವ ದಾರಿ ತೆರೆಯಲಿದೆ. ತುರ್ತು ಲಸಿಕೆ ಬಳಕೆಗೆ ಅನುಮೋದನೆ ನೀಡುವಂತೆ ವಿಶ್ವ ಆರೋಗ್ಯ ಸಂಸ್ಥೆಗೆ ಅರ್ಜಿ ಸಲ್ಲಿಸಲಾಗಿದ್ದು, ಜುಲೈ-ಸೆಪ್ಟೆಂಬರ್ ಒಳಗೆ ಅನುಮೋದನೆ ನಿರೀಕ್ಷಿಸಲಾಗಿದೆ.

ಯುನೈಟೆಡ್ ಸ್ಟೇಟ್ಸ್, ಬ್ರೆಜಿಲ್, ಹಂಗೇರಿ ಸೇರಿದಂತೆ 60 ಕ್ಕೂ ಹೆಚ್ಚು ದೇಶಗಳಲ್ಲಿ ಅನುಮೋದನೆ ಪ್ರಕ್ರಿಯೆ ನಡೆಯುತ್ತಿದೆ. 13 ದೇಶಗಳಲ್ಲಿ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದ್ದು, ಇನ್ನೂ ಹಲವು ದೇಶಗಳು ಇದಕ್ಕೆ ಶೀಘ್ರವೇ ಸೇರಲಿವೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img