Monday, June 14, 2021
Homeಸುದ್ದಿ ಜಾಲಭಾರತದಲ್ಲಿಂದು ಹೊಸದಾಗಿ 94,052 ಕೊರೊನಾ ಕೇಸ್ ಪತ್ತೆ, 6,148 ಮಂದಿ ಸಾವು

ಇದೀಗ ಬಂದ ಸುದ್ದಿ

ಭಾರತದಲ್ಲಿಂದು ಹೊಸದಾಗಿ 94,052 ಕೊರೊನಾ ಕೇಸ್ ಪತ್ತೆ, 6,148 ಮಂದಿ ಸಾವು

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು , ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 94,052 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ .

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 94,052 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,91,83,121ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 6148 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 3,59,676 ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 1,51,367 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಈವರೆಗೆ 2,76,55,493 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 11,67,952 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಒಟ್ಟು ಪ್ರಕರಣಗಳು: 2,91,83,121
ಒಟ್ಟು ಡಿಸ್ಚಾರ್ಜ್ ಗಳು: 2,76,55,493
ಸಾವಿನ ಸಂಖ್ಯೆ: 3,59,676
ಸಕ್ರಿಯ ಪ್ರಕರಣಗಳು: 11,67,952

ಒಟ್ಟು ಲಸಿಕೆ: 23,90,58,360

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img