Monday, June 14, 2021
Homeಸುದ್ದಿ ಜಾಲಬೆಳಗಾವಿಯಲ್ಲಿ ಇನ್ನೊಂದು ವಾರ ಲಾಕ್ ಡೌನ್ ವಿಸ್ತರಿಸಿ : ಸಿಎಂ ಗೆ ಸಚಿವ ...

ಇದೀಗ ಬಂದ ಸುದ್ದಿ

ಬೆಳಗಾವಿಯಲ್ಲಿ ಇನ್ನೊಂದು ವಾರ ಲಾಕ್ ಡೌನ್ ವಿಸ್ತರಿಸಿ : ಸಿಎಂ ಗೆ ಸಚಿವ ಕಾರಜೋಳ ಮನವಿ

ಬೆಳಗಾವಿ: ಬೆಳಗಾವಿ ಜಿಲ್ಲೆಯು ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿಕೊಂಡಿದೆ. ಪಾಸಿಟಿವಿಟಿ ದರ ಶೇ.9 ರಷ್ಟಿರುವದರಿಂದ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಅನುಮತಿಯೊಂದಿಗೆ ಲಾಕಡೌನ್ ಇನ್ನೊಂದು ವಾರ ಕಾಲ ವಿಸ್ತರಿಸಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿದರು.

ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಬೆಳಗಾವಿಯೂ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾಡಳಿತ ಗಳೊಂದಿಗೆ ಗುರುವಾರ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

ಆಟೋಮೊಬೈಲ್, ಕಟ್ಟಡ ನಿರ್ಮಾಣದಂತಹ ಪ್ರಮುಖ ಚಟುವಟಿಕೆಗಳಿಗೆ ಅವಕಾಶ ನೀಡುವ ಮೂಲಕ ಇನ್ನೊಂದು ವಾರ ಲಾಕಡೌನ್ ಮುಂದುವರಿಸಬೇಕು ಎಂದರು

ಜಿಲ್ಲೆಯಲ್ಲಿ ಮುಂಗಾರು ಕೃಷಿ ಚಟುವಟಿಕೆ ಚುರುಕಿನಿಂದ ನಡೆದಿದೆ. ಜಿಲ್ಲಾ ಮಟ್ಟದಲ್ಲಿ ರೇಷನ್ ಮತ್ತಿತರ ವ್ಯವಸ್ಥೆ ಮಾಡಲಾಗಿದೆ. ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಮಕ್ಕಳ ಆಸ್ಪತ್ರೆಯನ್ನು ಕೂಡ ಸಜ್ಜುಗೊಳಿಸಲಾಗುತ್ತಿದೆ ಎಂದು ಸಚಿವ ಕಾರಜೋಳ ವಿವರಿಸಿದರು.

ಜಿಲ್ಲೆಯಲ್ಲಿ ಒಟ್ಟಾರೆ 135 ತಂಡಗಳನ್ನು ರಚಿಸಿಕೊಂಡು ಇದುವರೆಗೆ 1300 ಕ್ಕೂ ಗ್ರಾಮಗಳಲ್ಲಿ ರ್ಯಾಪಿಡ್ ಆಯಂಟಿಜೆನ್ ಟೆಸ್ಟ್ (ರ್ಯಾಟ್) ಮಾಡಲಾಗಿದ್ದು, ಇತರೆ ಪರೀಕ್ಷೆ ಸೇರಿದಂತೆ ಒಟ್ಟಾರೆ ಪಾಸಿಟಿವಿಟಿ ದರ ಶೇ. 8.9 ರಷ್ಟಿದೆ. ಗಡಿ ಭಾಗದ ದೊಡ್ಡ ಜಿಲ್ಲೆಯಾಗಿರುವುದರಿಂದ ಪಾಸಿಟಿವಿಟಿ ದರ ನಿಯಂತ್ರಣಕ್ಕೆ ಇನ್ನೂ ಒಂದು ವಾರ ಲಾಕಡೌನ್ ಮಾಡಿದರೆ ಮಾತ್ರ ಅನುಕೂಲವಾಗಲಿದೆ. ಆದ್ದರಿಂದ ಲಾಕಡೌನ್ ಮುಂದುವರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಮುಖ್ಯಮಂತ್ರಿಗಳ ಮನವರಿಕೆಗೆ ಪ್ರಯತ್ನಿಸಿದರು.

ಜಿಲ್ಲೆಯಲ್ಲಿ ಐದು ತಾಲೂಕುಗಳಲ್ಲಿ ಪಾಸಿಟಿವಿಟಿ ದರ 5 ಕ್ಕಿಂತ ಕಡಿಮೆ ಇದೆ. ಇನ್ನುಳಿದ ತಾಲ್ಲೂಕುಗಳಲ್ಲಿ ಶೇ.10 ಹಾಗೂ ಅದಕ್ಕಿಂತಲೂ ಹೆಚ್ಚು ಪಾಸಿಟಿವಿಟಿ ದರ ಇದೆ. ಇನ್ನೊಂದು ವಾರ ಅವಕಾಶ ಸಿಕ್ಕರೆ ಪಾಸಿಟಿವಿಟಿ ದರ ಶೇ.5 ಕ್ಕಿಂತ ಕಡಿಮೆಗೊಳಿಸಲು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ರ್ಯಾಟ್ ನಲ್ಲಿ ಪಾಸಿಟಿವಿಟಿ ದರ ಶೇ.4 ಕ್ಕಿಂತ ಕಡಿಮೆಯಿದೆ. ಆದರೆ ಆರ್.ಟಿ.-ಪಿಸಿಆರ್ ಪರೀಕ್ಷೆಯಲ್ಲಿ ಪಾಸಿಟಿವಿಟಿ ದರ ಹೆಚ್ಚಾಗಿ ಕಂಡುಬಂದಿದೆ. ಇನ್ನೊಂದು ವಾರ ಕಾಲಾವಕಾಶ ಸಿಕ್ಕರೆ ಪಾಸಿಟಿವಿಟಿ ದರ ಕಡಿಮೆಗೊಳಿಸಲು ಸಾಧ್ಯವಾಗಲಿದೆ ಎಂದರು

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img