Tuesday, June 15, 2021
Homeಸುದ್ದಿ ಜಾಲಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ವಿರುದ್ಧ FIR ದಾಖಲು

ಇದೀಗ ಬಂದ ಸುದ್ದಿ

ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ವಿರುದ್ಧ FIR ದಾಖಲು

ಜಿಲ್ಲಾ ಪಂಚಾಯತ್​ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಅವರ ಸಹೋದರ ಹನುಮಂತ ಅವರ ಕೊಲೆ ಆರೋಪದಲ್ಲಿ ಬಿಜೆಪಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ವಿರುದ್ಧ ಪ್ರಥಮ ವರ್ತಮಾನ ವರದಿ (ಎಫ್ಐಆರ್) ದಾಖಲಾಗಿದೆ. ಜೇವರ್ಗಿ ತಾಲೂಕಿನ ಬಳ್ಳುಂಡಗಿ ಗ್ರಾಮದ ಬಳಿ ಹನುಮಂತ ಅವರ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಹನುಮಂತ ಅವರ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿತ್ತು. ಈ ಘಟನೆಗೆ ಸಂಬಂಧಪಟ್ಟಂತೆ ಒಟ್ಟು 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ಹಾಗೂ ಸಹೋದರ ಬಸವರಾಜ್ ಪಾಟೀಲ್ ವಿರುದ್ಧ ಕೊಲೆಗೆ ಕುಮ್ಮಕ್ಕು ನೀಡಿರುವ ಆರೋಪ ಕೇಳಿ ಬಂದಿದೆ.

ಕೊಲೆಯಾದ ಹನುಮಂತ ಹಾಗೂ ಆತನ ಅಣ್ಣ ಶಾಂತಪ್ಪ ಜೇವರ್ಗಿ ತಾಲೂಕಿನ ಮಯೂರ ಗ್ರಾಮದ ಬಿಜೆಪಿ ಮುಖಂಡ ಶಿವಲಿಂಗ ಭಾವಿಕಟ್ಟಿ ಎಂಬವರ ಕೊಲೆ ಪ್ರಕರಣದಲ್ಲಿ 2019ರ ನವೆಂಬರ್‌ನಲ್ಲಿ ಜೈಲು ಸೇರಿದ್ದರು. ಇವರು ಕೆಲ ತಿಂಗಳ ಹಿಂದಷ್ಟೇ ಜಾಮೀನು ಪಡೆದು ಜೈಲಿಂದ ಹೊರ ಬಂದಿದ್ದರು.

ಜೂನ್​ 7 ರಂದು ಹನುಮಂತ ಕೊಡಲಗಿ ಕಾರಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img