Tuesday, June 15, 2021
Homeರಾಜ್ಯಪೆಟ್ರೋಲ್ , ಡಿಸೇಲ್ ಬೆಲೆ ಏರಿಕೆ ಖಂಡಿಸಿ ಅರೆಬೆತ್ತಲೆ ಪ್ರತಿಭಟನೆ

ಇದೀಗ ಬಂದ ಸುದ್ದಿ

ಪೆಟ್ರೋಲ್ , ಡಿಸೇಲ್ ಬೆಲೆ ಏರಿಕೆ ಖಂಡಿಸಿ ಅರೆಬೆತ್ತಲೆ ಪ್ರತಿಭಟನೆ

ಆನೇಕಲ್ : ದಿನ ಬಳಕೆ ವಸ್ತುಗಳು ಸೇರಿದಂತೆ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಇಂದು ಬಹುಜನ ಸಮಾಜ ಪಕ್ಷದ ವತಿಯಿಂದ ಅರೆಬೆತ್ತಲೆ ಪ್ರತಿಭಟನೆ ನಡೆಸುವ ಮೂಲಕ ತಹಶೀಲ್ದಾರ್ ರವರ ಮುಖಾಂತರವಾಗಿ ರಾಷ್ಟ್ರಪತಿಗಳಿಗೆ ಮನವಿ ಪತ್ರವನ್ನ ಸಲ್ಲಿಸಿದರು.

ಆನೇಕಲ್ ತಾಲ್ಲೂಕು ಬಹುಜನ ಸಮಾಜ ಪಕ್ಷದ ತಾಲ್ಲೂಕು ಅಧ್ಯಕ್ಷ ಡಾ. ಚಿನ್ನಪ್ಪ ವೈ ಚಿಕ್ಕಹಾಗಡೆ ಅವರ ನೇತೃತ್ವದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ ಸೇರಿದಂತೆ ದಿನಬಳಕೆ ವಸ್ತುಗಳ ಮೇಲೆ ಬೆಲೆ ಏರಿಕೆಯಾಗುತ್ತಿರುವುದರಿಂದ ಸಾಮಾನ್ಯ ಜನರು ಬದುಕು ನಡೆಸುವುದೇ ಕಷ್ಟಕರವಾಗಿದೆ.

ಕೊರೊನಾ ಲಾಕ್ ಡೌನ್ ನಿಂದಾಗಿ ಜನರು ಕೆಲಸಗಳನ್ನ ಕಳೆದುಕೊಂಡು ಸಮಸ್ಯೆಗೆ ಸಿಲುಕಿರುವ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಬೆಲೆ ಏರಿಕೆಯನ್ನು ಮಾಡಿ ಜನರ ಮೇಲೆ ಮತ್ತಷ್ಟು ಹೊರೆ ಹಾಕುತ್ತಿದ್ದಾರೆ‌. ಹಾಗಾಗಿ ರಾಷ್ಟ್ರಪತಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಅವೈಜ್ಞಾನಿಕ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕೆಂದು ಆನೇಕಲ್ ತಹಶೀಲ್ದಾರ್ ದಿನೇಶ್ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರವನ್ನು ಸಲ್ಲಿಸುವ ಮೂಲಕ ಬಿಎಸ್ಪಿ ಪಕ್ಷದ ತಾಲ್ಲೂಕು ಅಧ್ಯಕ್ಷ ಡಾ. ಚಿನ್ನಪ್ಪ ವೈ ಚಿಕ್ಕಹಾಗಡೆ ಅವರು ಒತ್ತಾಯಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img