Thursday, July 29, 2021
Homeಕೋವಿಡ್-19ಹಾಸನ : ಜಿಲ್ಲೆಯಲ್ಲಿ 24 ಗಂಟೆಯಲ್ಲಿ 505 ಜನರಿಗೆ ಕೋವಿಡ್ ಪತ್ತೆ, 7 ಮಂದಿ ಸಾವು

ಇದೀಗ ಬಂದ ಸುದ್ದಿ

ಹಾಸನ : ಜಿಲ್ಲೆಯಲ್ಲಿ 24 ಗಂಟೆಯಲ್ಲಿ 505 ಜನರಿಗೆ ಕೋವಿಡ್ ಪತ್ತೆ, 7 ಮಂದಿ ಸಾವು

ಹಾಸನ : ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಇಳಿಮುಖದತ್ತ ಸಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 505 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದು, ಸೋಂಕಿಗೆ 7 ಜನರು ಬಲಿಯಾಗಿದ್ದಾರೆ.

ಈ ಕುರಿತಂತೆ ಜಿಲ್ಲಾ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 505 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 95,695ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 1030 ಜನರು ಸೇರಿದಂತೆ ಇದುವರೆಗೆ 87,239 ಜನರು ಗುಣಮುಖರಾಗಿರುವ ಕಾರಣ, ಜಿಲ್ಲೆಯಲ್ಲಿ 7,331 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ಇನ್ನೂ ಜಿಲ್ಲೆಯಲ್ಲಿ ಕೊರೋನಾ ಸಾವಿನ ಪ್ರಮಾಣದಲ್ಲೂ ಕೂಡ ಇಳಿಕೆ ಕಂಡಿದ್ದು, 24 ಗಂಟೆಯಲ್ಲಿ ಸೋಂಕಿತರಾದಂತ 7 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 1125ಕ್ಕೆ ಏರಿಕೆಯಾಗಿದೆ ಎಂಬುದಾಗಿ ತಿಳಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img