Thursday, July 29, 2021
Homeರಾಜ್ಯSSLC ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

SSLC ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್

 ಬೆಂಗಳೂರು : ಕೊರೋನಾ ಸೋಂಕಿನ ನಡುವೆಯೂ ಜುಲೈ 2021ರಲ್ಲಿ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ನಡೆಯಲಿದೆ. ಇಂತಹ ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವಂತ ಅಧಿಕಾರಿಗಳು, ಶಿಕ್ಷಕರು, ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ನೀಡುವಂತೆ ಶಿಕ್ಷಣ ಇಲಾಖೆಯು ಆರೋಗ್ಯ ಇಲಾಖೆಗೆ ಕೋರಿದೆ.

ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್ ಆರ್ ಉಮಾಶಂಕರ್, ಆರೋಗ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ಪತ್ರ ಬರೆದಿದ್ದು, 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ದಿನಾಂಕ 21-06-2021 ರಿಂದ 05-07-2021ರವರೆಗೆ ನಡೆಸಲು ಉದ್ದೇಶಿಸಲಾಗಿತ್ತು. ಆದ್ರೇ.. ಕೋವಿಡ್ 2ನೇ ಅಲೆಯು ವ್ಯಾಪಿಸಿರುವ ಕಾರಣದಿಂದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಸದರಿ ಪರೀಕ್ಷೆಯನ್ನು ಜುಲೈ 3ನೇ ವಾರದಲ್ಲಿ 2 ದಿನಗಳಿಗೆ ಸೀಮಿತಗೊಳಿಸಿ ನಡೆಸಲು ಉದ್ದೇಶಿಸಲಾಗಿದೆ.

ಎಲ್ಲಾ ರೀತಿಯ ಸುರಕ್ಷತಾ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ ರಾಜ್ಯದ ಸುಮಾರು 6 ಸಾವಿರ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯವರಿಗೆ ಆರೋಗ್ಯದ ಹಿತದೃಷ್ಠಿಯಿಂದ ಮತ್ತು ಇವರುಗಳಲ್ಲಿ ಆತ್ಮಸ್ಥೈರ್ಯ ತುಂಬಿ, ಕರ್ತವ್ಯ ನಿರ್ವಹಿಸಲು ಅನುವಾಗಲು ಕೋವಿಡ್ ಲಸಿಕೆಯನ್ನು ಹಾಕುವುದು ಅತ್ಯಾವಶ್ಯಕವಾಗಿರುತ್ತದೆ.

ಆದ್ದರಿಂದ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು(ಆಡಳಿತ) ಅವರು ನೀಡುವ ಪಟ್ಟಿಯಲ್ಲಿನ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯವರಿಗೆ ಆದ್ಯತೆಯ ಮೇರೆಗೆ ಲಸಿಕೆಯನ್ನು ಹಾಕಲು ಸೂಕ್ತ ಕ್ರಮವಹಿಸುವಂತೆ ತಮ್ಮ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲು ಕೋರಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img