Thursday, July 29, 2021
Homeಬೆಂಗಳೂರುನಟ ಸಂಚಾರಿ ವಿಜಯ್ ಸಾವಿಗೆ ರಾಜಕೀಯ ಗಣ್ಯರ ಸಂತಾಪ

ಇದೀಗ ಬಂದ ಸುದ್ದಿ

ನಟ ಸಂಚಾರಿ ವಿಜಯ್ ಸಾವಿಗೆ ರಾಜಕೀಯ ಗಣ್ಯರ ಸಂತಾಪ

ಬೆಂಗಳೂರು, ಜೂನ್ 15: ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದ ರಾಷ್ಟ್ರಪ್ರಶಸ್ತಿ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಸುಕಿನ ಜಾವ 3.30ಕ್ಕೆ ಸಾವನ್ನಪ್ಪಿದರು.

ಭಾನುವಾರದಿಂದ ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದ ಸಂಚಾರಿ ವಿಜಯ್ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಬನ್ನೇರುಘಟ್ಟ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ವಿಜಯ್‌ಗೆ ಭಾರೀ ಪ್ರಮಾಣದ ಏಟು ಬಿದ್ದಿದ್ದರಿಂದ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು.

ಸಿಎಂ ಯಡಿಯೂರಪ್ಪ ತೀವ್ರ ಸಂತಾಪ

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ಸೂಚಿಸಿದ್ದು, “”ರಂಗಭೂಮಿ, ಸಿನೆಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿಯನ್ನು ನೀಡಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ,” ಎಂದು ತಿಳಿಸಿದ್ದಾರೆ.

ಸಚಿವ ಮುರುಗೇಶ್ ನಿರಾಣಿ ಶೋಕ ಸಂದೇಶ

“ಅಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ನಟ “ಸಂಚಾರಿ ವಿಜಯ್’ ನಿಧನರಾಗಿದ್ದು, ಇವರ ಅಕಾಲಿಕ ಮರಣದ ವಿಷಯ ತಿಳಿದು ಮನಸ್ಸಿಗೆ ಅತೀವ ನೋವುಂಟಾಯಿತು. ಇವರ ಅಮೋಘ ಅಭಿನಯದ “ನಾನು ಅವನಲ್ಲ ಅವಳು’ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಕನ್ನಡ ಮಾತ್ರವಲ್ಲದೆ ತಮಿಳು ಸಿನೆಮಾರಂಗದಲ್ಲಿಯೂ ಇವರು ತಮ್ಮ ನಟನಾ ಪ್ರತಿಭೆಯನ್ನು ತೋರಿಸಿದ್ದರು. ಭಗವಂತ ಅವರ ಕುಟುಂಬ ವರ್ಗದವರಿಗೂ, ಬಂಧು- ಮಿತ್ರರಿಗೂ, ಸಮಸ್ತ ಅಭಿಮಾನಿಗಳಿಗೂ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ.”

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img