Sunday, August 1, 2021
Homeಜಿಲ್ಲೆಬೆಂಗಳೂರುಕರ್ನಾಟಕದಿಂದ ಕೇರಳಕ್ಕೆ ಸಾರಿಗೆ ಬಸ್ ಸಂಚಾರ ಪುನರಾರಂಭ

ಇದೀಗ ಬಂದ ಸುದ್ದಿ

ಕರ್ನಾಟಕದಿಂದ ಕೇರಳಕ್ಕೆ ಸಾರಿಗೆ ಬಸ್ ಸಂಚಾರ ಪುನರಾರಂಭ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೊರೋನಾ ಕಾರಣದಿಂದಾಗಿ ಕರ್ನಾಟಕದಿಂದ ಕೇರಳ ರಾಜ್ಯಕ್ಕೆ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಇದೀಗ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡ ಕಾರಣದಿಂದಾಗಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಕೇರಳ ರಾಜ್ಯಕ್ಕೆ ಸಾರಿಗೆ ಬಸ್ ಸಂಚಾರವನ್ನು ಪುನರಾರಂಭಿಸಿದೆ. ಆದ್ರೇ ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸುವಂತ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ.

ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೋವಿಡ್-19 ಲಾಕ್ ಡೌನ್ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತರ ರಾಜ್ಯ ಸಾರಿಗೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿರುತ್ತದೆ. ಪ್ರಸ್ತುತ ಕೋವಿಡ್-19 ಲಾಕ್ ಡೌನ್ ಸಡಿಲಗೊಂಡಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 12-07-2021ರಿಂದ ಬೆಂಗಳೂರು, ಮೈಸೂರು, ಮಂಗಳೂರು, ಪುತ್ತೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಸಾರಿಗೆಗಳ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುತ್ತಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img