Friday, July 23, 2021
Homeಸುದ್ದಿ ಜಾಲ24 ಗಂಟೆಗಳಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಇದೀಗ ಬಂದ ಸುದ್ದಿ

24 ಗಂಟೆಗಳಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಪುಲ್ವಾಮಾ: ಜಮ್ಮು ಕಾಶ್ಮೀರದಲ್ಲಿ ಎರಡು ದಿನಗಳಲ್ಲಿ ನಡೆದ ಎನ್’ ಕೌಂಟರ್ ನಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆದು ಇಪ್ಪತ್ತನಾಲ್ಕು ಗಂಟೆಗಳಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿರುವುದಾಗಿ ಜಮ್ಮು ಕಾಶ್ಮೀರ ಝೋನ್ ಪೊಲೀಸರು ಅಧಿಕೃತವಾಗಿ ತಿಳಿಸಿದ್ದಾರೆ.

ಪುಲ್ವಾಮಾ ಜಿಲ್ಲೆಯ ಪುಚಲ್‌ನಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ಪ್ರದೇಶದಲ್ಲಿ ಉಗ್ರರನ್ನು ಮಟ್ಟ ಹಾಕುವ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುಲ್ವಾಮಾ ಜಿಲ್ಲೆಯ ಪುಚಲ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಇನ್ನು ಇಬ್ಬರು ಉಗ್ರರು ಭದ್ರತಾ ಪಡೆಗೆ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯಾವುದೇ ಹಾನಿಯಾಗದ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತು ಭದ್ರತಾ ಪಡೆ ಸಿಬ್ಬಂದಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img