Friday, July 23, 2021
Homeಜಿಲ್ಲೆಮೈಸೂರುರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಮೈಸೂರಿನ ಯುವಕ

ಇದೀಗ ಬಂದ ಸುದ್ದಿ

ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಮೈಸೂರಿನ ಯುವಕ

ಮೈಸೂರು: ಪಶ್ಚಿಮ ಬಂಗಾಳದಲ್ಲಿ‌ ಮೂಲಭೂತವಾದಿಗಳಿಂದ ಹಿಂಸಾಚಾರ ನಡೆಯುತ್ತಿದೆ ಎಂದು ರಾಜ್ಯದ ಯುವಕನೋರ್ವ ಆರೋಪಿಸಿದ್ದಾನೆ. ಅಲ್ಲದೆ, ಕೂಡಲೇ ಅಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮೈಸೂರಿನ ಯುವಕ ತನ್ನ ರಕ್ತದಲ್ಲೇ ಪತ್ರ ಬರೆದಿದ್ದಾನೆ.

ಚೇತನ್ ಮಂಜುನಾಥ್‌ ಹೀಗೆ ಪತ್ರ ಬರೆದಿರುವ ಯುವಕ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರು, ಮೂಲಭೂತವಾದಿಗಳಿಂದ ಹಿಂಸೆಯಾಗುತ್ತಿದೆ. 30 ಬಿಜೆಪಿ ಕಾರ್ಯಕರ್ತರು, ಅಮಾಯಕ ಹಿಂದೂಗಳ ಹತ್ಯೆಯಾಗಿದೆ. 7 ಸಾವಿರ ಹಿಂದೂ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಈ ಸಂಬಂಧ ಸುಮಾರು 15,000 ಪ್ರಕರಣಗಳು ದಾಖಲಾಗಿವೆ. 1 ಲಕ್ಷಕ್ಕೂ ಹೆಚ್ಚು ಜನ ಜೀವಭಯದಿಂದ ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದಾರೆ ಎಂದು ಯುವಕ ದೂರಿದ್ದಾನೆ.

ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಎಲ್ಲಾ ಹಿಂಸೆಗಳಿಗೆ ಸರ್ಕಾರ ಪರೋಕ್ಷ ಬೆಂಬಲ ನೀಡುತ್ತಿದೆ. ಹೀಗಾಗಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರಿ ಎಂದು ಯುವಕ ಪತ್ರದ ಮೂಲಕ ಪ್ರಧಾನಿಗೆ ಮನವಿ ಮಾಡಿದ್ದಾನೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img