Sunday, August 1, 2021
HomeದೆಹಲಿCBI ಕಚೇರಿಯಲ್ಲಿ ಬೆಂಕಿ

ಇದೀಗ ಬಂದ ಸುದ್ದಿ

CBI ಕಚೇರಿಯಲ್ಲಿ ಬೆಂಕಿ

ನವದೆಹಲಿ: ದೆಹಲಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸಿಬಿಐ (ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್) ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಬೀಡುಬಿಟ್ಟ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ.

ಸಿಬಿಐ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಮಾಹಿತಿಯನ್ನು ಅಗ್ನಿಶಾಮಕ ದಳಕ್ಕೆ ಮುಟ್ಟಿಸಲಾಯಿತು. ಕೂಡಲೇ ಸ್ಥಳಕ್ಕೆ ದಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡರು.

ಸಿಬ್ಬಂದಿಯಿಂದ ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನಗಳು ನಡೆಯುತ್ತಿವೆ. ಬೆಂಕಿ ಹೊತ್ತಿರುವುದರ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಬೆಂಕಿ ಕೆನ್ನಾಲೆಗೆ ಕಚೇರಿ ತುಂಬ ಹರಡುತ್ತಿದೆ ಎಂದು ಹೇಳಲಾಗುತ್ತದೆ. ಶೀಘ್ರದಲ್ಲೇ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗುವುದು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಹೇಳಿದ್ದಾರೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img