Sunday, August 1, 2021
Homeಸುದ್ದಿ ಜಾಲಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಇನ್ನಿಲ್ಲ

ಇದೀಗ ಬಂದ ಸುದ್ದಿ

ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಇನ್ನಿಲ್ಲ

ಶಿಮ್ಲಾ(ಹಿಮಾಚಲ ಪ್ರದೇಶ) : ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ವೀರಭದ್ರ ಸಿಂಗ್ (87) ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಶಿಮ್ಲಾದ ಇಂದಿರಾಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಅಧೀಕ್ಷಕ ಡಾ.ಜಾನಕ್ ರಾಜ್​ ಹೇಳಿದ್ದಾರೆ.

ಏಪ್ರಿಲ್ 13 ರಂದು ಅವರಿಗೆ ಕೋವಿಡ್ ದೃಢಪಟ್ಟಿದ್ದು, ಮೊಹಾಲಿನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚೇತರಿಸಿಕೊಂಡ ಕೆಲವೇ ದಿನಗಳಲ್ಲಿ ಮತ್ತೆ ವೀರಭದ್ರ ಸಿಂಗ್​ಗೆ ಕೋವಿಡ್ ದೃಢಪಟ್ಟಿತ್ತು. ಜತೆಗೆ ಹೃದಯ ಸಂಬಂಧಿ ಕಾಯಿಲೆ ಇದ್ದಿದ್ದರಿಂದ ಆರೋಗ್ಯ ಮತ್ತಷ್ಟು ಬಿಗಡಾಯಿಸಿತ್ತು. ಹಾಗಾಗಿ ಹೃದ್ರೋಗ ವಿಭಾಗದ ವೈದ್ಯರು ಅವರ ಮೇಲೆ ನಿಗಾ ಇರಿಸಿದ್ದರು. ತೀವ್ರ ಉಸಿರಾಟದಿಂದ ಬಳಲುತ್ತಿದ್ದ ಸಿಂಗ್​ರನ್ನು ವೆಂಟಿಲೇಟರ್​ಗೆ ಸ್ಥಳಾಂತರಿಸಲಾಗಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img