Sunday, August 1, 2021
Homeಜಿಲ್ಲೆಬೆಂಗಳೂರುಕನ್ನಡತಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ

ಇದೀಗ ಬಂದ ಸುದ್ದಿ

ಕನ್ನಡತಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ

ಬೆಂಗಳೂರು : ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಚಿತ್ರದ ಅಭಿನಯಕ್ಕಾಗಿ ಕನ್ನಡದ ನಟಿ ಹರಿಪ್ರಿಯಾ ಅವರಿಗೆ ಹಾಲಿವುಡ್ ನ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ.

ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್‌ ಮೂಲಕ ನಿರ್ಮಾಣಗೊಂಡಿರುವ ‘ಅಮೃತಮತಿ’ ಚಿತ್ರ ಹತ್ತಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗಳಲ್ಲಿ ಪ್ರದರ್ಶನ ಕಂಡಿದೆ. ಇದೀಗ ‘ಹಾಲಿವುಡ್ ಇಂಟರ್‌ನ್ಯಾಷನಲ್ ಗೋಲ್ಡನ್ ಏಜ್ ಚಿತ್ರೋತ್ಸವ’ದಲ್ಲಿ ಪ್ರದರ್ಶನ ಕಂಡಿದ್ದು, ನಟಿ ಹರಿಪ್ರಿಯಾಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ಲಭಿಸಿದೆ.

ಹರಿಪ್ರಿಯಾ ಈ ಹಿಂದೆ ನೋಯ್ಡಾದ ನಾಲ್ಕನೇ ಭಾರತೀಯ ವಿಶ್ವ ಸಿನಿಮೋತ್ಸವದಲ್ಲಿಯೂ ಅಮೃತಮತಿ ಚಿತ್ರದಲ್ಲಿನ ನಟನೆಗಾಗಿ ‘ಶ್ರೇಷ್ಠ ನಟಿ’ ಪ್ರಶಸ್ತಿಗೆ ಭಾಜನರಾಗಿದ್ದರು. ಒಟ್ಟು ಮೂರು ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅವರು ಶ್ರೇಷ್ಠ ನಟಿ ಪ್ರಶಸ್ತಿ ಪಡೆದಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img