Friday, July 30, 2021
Homeಜಿಲ್ಲೆಮಂಡ್ಯಅವರು ವಿಶೇಷ ಮಹಿಳೆ, ಅವರ ಬಗ್ಗೆ ನಾನ್ಯಾಕೆ ಮಾತನಾಡಲಿ:HDK

ಇದೀಗ ಬಂದ ಸುದ್ದಿ

ಅವರು ವಿಶೇಷ ಮಹಿಳೆ, ಅವರ ಬಗ್ಗೆ ನಾನ್ಯಾಕೆ ಮಾತನಾಡಲಿ:HDK

ಮಂಡ್ಯ: ಕೆಆರ್​​ಎಸ್ ಡ್ಯಾಂನಲ್ಲಿ ಬಿರುಕು ಮತ್ತು ಸುತ್ತಾಮುತ್ತ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಮೂರ್ನಾಲ್ಕು ದಿನಗಳಿಂದಲೂ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಡುವೆ ವಾಕ್ಸಮರ ನಡೆಯುತ್ತಲೇ ಇದೆ. ಈ ಮಧ್ಯೆ ತಮ್ಮ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ನೀಡಿರುವ ಹೇಳಿಕೆ ಕುರಿತು ಮಾಧ್ಯಮಗಳ ಸಿಬ್ಬಂದಿ ಕೇಳಿದ ಪ್ರಶ್ನೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸದೆ ಕೈ ಮುಗಿದರು.

ಕೆ.ಎಂ ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಿ.ಮಾದೇಗೌಡರ ಆರೋಗ್ಯ ವಿಚಾರಿಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಿರಿಯ ರಾಜಕಾರಣಿ ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಬಂದಿದ್ದೇನೆ. ಜಿಲ್ಲೆಯ ಜನ, ಸಮಸ್ಯೆಗಳ ಬಗ್ಗೆ ಮಾದೇಗೌಡರು ಧ್ವನಿ ಎತ್ತುತ್ತಿದ್ದರು. ಈಗ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗಿ ಹಿಂದಿನಂತಿರಲು ಭಗವಂತನಲ್ಲಿ ಕೋರುತ್ತೇನೆ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img