Sunday, August 1, 2021
Homeಸುದ್ದಿ ಜಾಲತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಅಣ್ಣಾಮಲೈ

ಇದೀಗ ಬಂದ ಸುದ್ದಿ

ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಅಣ್ಣಾಮಲೈ

ಚೆನ್ನೈ: ನಿವೃತ್ತ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ಪೊಲೀಸ್ ಹುದ್ದೆ ತೊರೆದು ರಾಜಕೀಯ ರಂಗ ಪ್ರವೇಶಿಸಿದ್ದು ಗೊತ್ತಿರಬೇಕಲ್ಲ. ಕಳೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಆದರೂ, ಕರ್ನಾಟಕದಲ್ಲಿ ಜನಪ್ರಿಯ ಪೊಲೀಸ್ ಅಧಿಕಾರಿಯಾಗಿದ್ದ ಅಣ್ಣಾಮಲೈಗೆ ಬಿಜೆಪಿ ಮಹತ್ವದ ಹುದ್ದೆ ನೀಡಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ತಮಿಳುನಾಡಿನ ಕರೂರು ಮೂಲದ ಕೆ ಅಣ್ಣಾಮಲೈರನ್ನು ಚುನಾವಣೆಗೂ ಮುನ್ನ ತಮಿಳುನಾಡು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಈಗ ಹಾಲಿ ಅಧ್ಯಕ್ಷ ಡಾ ಲೋಗನಾಥನ್ ಮುರಗನ್ ಅವರು ಮೋದಿ ಸಚಿವ ಸಂಪುಟ ಸೇರಿದ್ದರಿಂದ ಅಣ್ಣಾಮಲೈಗೆ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ. ವಾರ್ತಾ ಮತ್ತು ಪ್ರಸಾರ ಖಾತೆಯ ಸಹಾಯಕ ಸಚಿವರಾಗಿ ಡಾ. ಲೋಗನಾಥನ್ ಮುರುಗನ್ ಅವರಿಂದು ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ ಅನುರಾಗ್ ಠಾಕೂರ್ ಅವರ ಸಮಕ್ಷಮದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಧಾನ ಮಂತ್ರಿ ಅವರು ತಮ್ಮ ಸಂಪುಟದಲ್ಲಿ ತಮಿಳುನಾಡಿಗೆ ಸಾಕಷ್ಟು ಪ್ರಾತಿನಿಧ್ಯ ನೀಡಿರುವುದಕ್ಕಾಗಿ ಪ್ರಧಾನ ಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img