Sunday, August 1, 2021
Homeದಕ್ಷಿಣ ಕನ್ನಡಮಂಗಳೂರುಮಂಗಳೂರು ವಿವಿ ಸಹಾಯಕ ಪ್ರೊಫೆಸರ್​ಗೆ 5 ವರ್ಷ ಶಿಕ್ಷೆ

ಇದೀಗ ಬಂದ ಸುದ್ದಿ

ಮಂಗಳೂರು ವಿವಿ ಸಹಾಯಕ ಪ್ರೊಫೆಸರ್​ಗೆ 5 ವರ್ಷ ಶಿಕ್ಷೆ

ಮಂಗಳೂರು: ಪಿಎಚ್​​ಡಿ ಬರೆಯುತ್ತಿದ್ದ ವಿದ್ಯಾರ್ಥಿನಿಯಲ್ಲಿ ಪ್ರಬಂಧ ಅಂಗೀಕಾರಕ್ಕೆ ಲಂಚ ಪಡೆದಿದ್ದ ಮಂಗಳೂರು ವಿವಿಯ ಸಹಾಯಕ ಪ್ರೊಫೆಸರ್​ಗೆ ದ.ಕ ಜಿಲ್ಲೆಯ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ 5 ವರ್ಷ ಶಿಕ್ಷೆ ವಿಧಿಸಿ ಆದೇಶಿಸಿದೆ.

ಪಿ.ಹೆಚ್.ಡಿ. ವಿದ್ಯಾರ್ಥಿನಿ ಪ್ರೇಮ ಡಿ’ಸೋಜ ಎಂಬವರ ಪ್ರಬಂಧ ಅಂಗೀಕರಿಸಲು ಮಂಗಳೂರು ಯುನಿವರ್ಸಿಟಿಯ ಸಮಾಜ ಶಾಸ್ತ್ರದ ಸಹಾಯಕ ಪ್ರೊಫೆಸರ್ ಆಗಿರುವ ಡಾ.ಅನಿತಾ ರವಿಶಂಕರ್ ಲಂಚದ ಬೇಡಿಕೆಯಿಟ್ಟಿದ್ದರು. ಮೈಸೂರಿನಿಂದ ಬರುವ ಬಾಹ್ಯ ಪರಿವೀಕ್ಷಕರ ಹಣ ರೂ 16,800 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಇವರು ಮುಂಗಡ ಹಣ ರೂ. 5,000 ವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ನಡೆದಿತ್ತು.

ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ದಾಳಿ ಮಾಡಿ ಡಾ.ಅನಿತಾ ರವಿಶಂಕರ್ ಅವರನ್ನು ಬಂಧಿಸಿದ್ದರು. ಇವರು ಮೊದಲು ರೂ. 10,000, ನಂತರ ರೂ 4,000 ಮತ್ತು ತದನಂತರ ರೂ. 16,800 ಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು.

ಲೋಕಾಯುಕ್ತ ಸಂಸ್ಥೆಯ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ಸಾಕ್ಷಿ ವಿಚಾರಣೆಗೆ ಒಳ ಪಡಿಸಿ ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು, ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್.ಎನ್. ರಾಜೇಶ್ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದು ಆರೋಪಿಗೆ ಶಿಕ್ಷೆ ವಿಧಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img