Friday, July 30, 2021
Homeಸುದ್ದಿ ಜಾಲಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನ

ಇದೀಗ ಬಂದ ಸುದ್ದಿ

ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನ

ಲಕ್ನೋ : ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಲಕ್ನೋದಲ್ಲಿ ನಿಧನರಾಗಿದ್ದಾರೆ. ಎರಡು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಯಾಣ್ ಸಿಂಗ್ ಅವರು ಪಿಜಿಐ ಲಕ್ನೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿಂಗ್ ಅವರನ್ನು ಚಿಕಿತ್ಸೆಗಾಗಿ ಮೊದಲು ರಾಜ್ಯ ರಾಜಧಾನಿಯ ಆರ್ ಎಂಎಲ್ ಸಂಸ್ಥೆಯಲ್ಲಿ ದಾಖಲಿಸಲಾಯಿತು, ಆದಾಗ್ಯೂ ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಿಜಿಐಗೆ ಸ್ಥಳಾಂತರಿಸಲಾಯಿತು ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಕೂಡ ಮಾಜಿ ಸಿಎಂ ಆರೋಗ್ಯದ ಬಗ್ಗೆ ದೂರವಾಣಿ ಮೂಲಕ ವಿಚಾರಿಸಿದ್ದರು. ಸಿಎಂ ಯೋಗಿ ಆದಿತ್ಯನಾಥ್ ಕೂಡ ಅನೇಕ ಬಾರಿ ಅವರನ್ನು ಆಸ್ಪತ್ರೆಗೆ ಭೇಟಿ ಮಾಡಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img