Friday, July 30, 2021
Homeಜಿಲ್ಲೆಬೆಂಗಳೂರುನನ್ನ-ಸುಮಲತಾರ ಅಶ್ಲೀಲ ವಿಡಿಯೋ ಮಾಡಲು ಹೊರಟಿದ್ರು ಕುಮಾರಸ್ವಾಮಿ:ರಾಕ್‌ಲೈನ್ ವೆಂಕಟೇಶ್

ಇದೀಗ ಬಂದ ಸುದ್ದಿ

ನನ್ನ-ಸುಮಲತಾರ ಅಶ್ಲೀಲ ವಿಡಿಯೋ ಮಾಡಲು ಹೊರಟಿದ್ರು ಕುಮಾರಸ್ವಾಮಿ:ರಾಕ್‌ಲೈನ್ ವೆಂಕಟೇಶ್

ಬೆಂಗಳೂರು: ಸಂಸದೆ, ನಟಿ ಸುಮಲತಾ ಅಂಬರೀಶ್‌ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ವಾಗ್ಯುದ್ಧದ ಮಧ್ಯೆ ಪ್ರವೇಶಿಸಿರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಇದೀಗ ಕುಮಾರಸ್ವಾಮಿ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

‘ನನ್ನ ಮತ್ತು ಸುಮಲತಾ ​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು. 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ನಕಲಿ ವಿಡಿಯೋ ಸೃಷ್ಟಿಸಿ ನನ್ನ ಮತ್ತು ಸುಮಲತಾ ಅವರ ತೇಜೋವಧೆ ಮಾಡಲು ಹೊರಟಿದ್ದರು, ಸುಮಲತಾ ಅವರ ಹೆಸರಿಗೆ ಮಸಿ ಬಳಿಯಲು ಯತ್ನಿಸಿದ್ದರು. ಚುನಾವಣೆಯ ವೇಳೆ ಚುನಾವಣಾ ಪ್ರಚಾರಕ್ಕಾಗಿ ನಾವೆಲ್ಲರೂ ಹೋಟೆಲ್‌ನಲ್ಲಿದ್ದೆವು. ಆಗ ನಾನು ಮತ್ತು ಸುಮಲತಾ ಹೋಟೆಲ್‌ಗೆ ತೆರಳುತ್ತಿದ್ದ ದೃಶ್ಯಗಳನ್ನು ಹೋಟೆಲ್‌ನ ಸಿಸಿ ಕ್ಯಾಮರಾದಿಂದ ಪಡೆದು ಆ ದೃಶ್ಯಗಳ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದರು ಎಂದು ಆರೋಪಿಸಿದರು.

ಚುನಾವಣೆ ವೇಳೆ ಸುಮಲತಾ ಅವರ ಹೆಗಲಿಗೆ ಯಾರೋ ಕೈ ಹಾಕಿದ್ದ ಫೋಟೋ ಬಳಸಿಕೊಂಡು ನಾನು ಮತ್ತು ಸುಮಲತಾ ಅವರು ಹೊಟೇಲ್ ಕಾರಿಡಾರ್ ಮೂಲಕ ರೂಂಗೆ ಇಬ್ಬರೇ ಹೋಗುತ್ತೇವೆ ಎಂದು ಅಶ್ಲೀಲ ಚಿತ್ರಗಳನ್ನು ತಂದು ಪೇಸ್ಟ್ ಮಾಡಿ ನಕಲಿ ವಿಡಿಯೋ ಸೃಷ್ಟಿಸಿ ಚುನಾವಣೆ ಸಂದರ್ಭದಲ್ಲಿ ಹರಿಬಿಡಲು ಆಸೆಪಟ್ಟಿದ್ದರು. ಅವರ ಚಾನೆಲ್‌ನಲ್ಲಿದ್ದ ಅಂಬರೀಶ್‌ ಅವರ ಅಭಿಮಾನಿಯೇ ಇದನ್ನು ನನಗೆ ಹೇಳಿದ್ದರು ಎಂದು ರಾಕ್‌ಲೈನ್ ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img