Friday, July 23, 2021
Homeಜಿಲ್ಲೆಬೆಂಗಳೂರುರಾಜೀನಾಮೆ ನೀಡಿದ ರಹಸ್ಯ ಬಿಚ್ಚಿಟ್ಟ ಡಿ.ವಿ. ಸದಾನಂದಗೌಡ

ಇದೀಗ ಬಂದ ಸುದ್ದಿ

ರಾಜೀನಾಮೆ ನೀಡಿದ ರಹಸ್ಯ ಬಿಚ್ಚಿಟ್ಟ ಡಿ.ವಿ. ಸದಾನಂದಗೌಡ

ಬೆಂಗಳೂರು: ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಡಿ.ವಿ. ಸದಾನಂದಗೌಡ ರಾಜೀನಾಮೆ ನೀಡಿದ್ದಾರೆ.

ಸಂಪುಟ ವಿಸ್ತರಣೆ ನಂತರ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಅವರು, ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾತನಾಡಿ ತಮ್ಮ ರಾಜೀನಾಮೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಪಕ್ಷದ ಅಧ್ಯಕ್ಷರ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದೇನೆ. ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು ಸಂತೋಷದಿಂದ ಇದ್ದೇನೆ. ಅಧಿಕಾರ ಇದ್ದಾಗ ಮತ್ತು ಇಲ್ಲದಿದ್ದಾಗ ಜನ ನನ್ನೊಂದಿಗೆ ಇದ್ದಾರೆ. ಜನರ ಪ್ರೀತಿಗೆ ನಾನು ಚಿರಋಣಿ ಎಂದು ಹೇಳಿದ್ದಾರೆ.

ರಾಜ್ಯ ರಾಜಕಾರಣದ ಬಗ್ಗೆ ಈಗಲೇ ಏನೂ ಹೇಳಲಾಗುವುದಿಲ್ಲ. ಪಕ್ಷ ನೀಡುವ ಜವಾಬ್ದಾರಿ ಮತ್ತು ಸೂಚನೆಯ ಮೇರೆಗೆ ಕೆಲಸ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img